ADVERTISEMENT

ವೇತನ ಹೆಚ್ಚಳಕ್ಕೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2012, 19:39 IST
Last Updated 18 ಡಿಸೆಂಬರ್ 2012, 19:39 IST

ಬೆಂಗಳೂರು: ರಾಜ್ಯ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮಸಹಾಯಕರ ವೇತನವನ್ನು ಹೆಚ್ಚಿಸಿರುವ ಸರ್ಕಾರದ ಕ್ರಮಕ್ಕೆ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ಗ್ರಾಮಸಹಾಯಕರ ಸಂಘ ಸಂತೋಷ ವ್ಯಕ್ತಪಡಿಸಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮುದ್ದುಕೃಷ್ಣ, ರೂ.3500 ರಿಂದ ರೂ.7000ಕ್ಕೆ ವೇತನವನ್ನು ಹೆಚ್ಚಿಸಲು ಕಾರಣರಾದ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರೂ ಆದ ಕೆ.ಎಸ್.ಈಶ್ವರಪ್ಪ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಣ್ಣ ಕೈಗಾರಿಕಾ ಸಚಿವ ರಾಜುಗೌಡ ಅವರಿಗೆ ಅಭಿನಂದನೆ ಸಲ್ಲಿಸಿದರು. ಗ್ರಾಮಸಹಾಯಕರಾಗಿ ಕೆಲಸ ಮಾಡುತ್ತಿರುವವರನ್ನು `ಡಿ' ದರ್ಜೆ ನೌಕರರಾಗಿ ಪರಿಗಣಿಸಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT