
ಬೆಂಗಳೂರು: ವೇತನ ಹೆಚ್ಚಿಸಿದ್ದರಿಂದ ಸಂಭ್ರಮಗೊಂಡಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆ ಪೌರ ಕಾರ್ಮಿಕರು ಹಾಗೂ ಮೇಸ್ತ್ರಿಗಳು ಬುಧವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಜಮಾಯಿಸಿದ್ದ ಸುಮಾರು 1,500 ಕಾರ್ಮಿಕರು, ವೇತನವನ್ನು ಹೆಚ್ಚಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಈ ನಿಟ್ಟಿನಲ್ಲಿ ಹೋರಾಡಿದ ಚನ್ನಮಲ್ಲ ವೀರಭದ್ರ ನಿಡುಮಾಮಿಡಿ ಸ್ವಾಮೀಜಿಗೆ ಕೃತಜ್ಞತೆ ತಿಳಿಸಿದರು.
ವಿಜಯೋತ್ಸವದ ಬಳಿಕ, ದಿವಂಗತ ರಾಕೇಶ್ ಸಿದ್ದರಾಮಯ್ಯ ನೆನಪಿನ ಕಾಣಿಕೆಯಾಗಿ ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಪೌರ ಕಾರ್ಮಿಕರರಿಗೆ ಉಚಿತ ಬಸ್ ಪಾಸ್ ನೀಡುವುದು ಸೇರಿದಂತೆ ಆರು ಅಂಶಗಳ ಬೇಡಿಕೆಯುಳ್ಳ ಮನವಿ ಪತ್ರವನ್ನು ಮೇಯರ್ ಮಂಜುನಾಥ್ ರೆಡ್ಡಿ ಅವರಿಗೆ ನೀಡಿದರು.
ಇತ್ತೀಚೆಗೆ ರಾಜ್ಯ ಸರ್ಕಾರವು ಪೌರ ಕಾರ್ಮಿಕರ ವೇತನವನ್ನು ₹14,040ಗೆ ಹೆಚ್ಚಿಸಿ ಆದೇಶ ಹೊರಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.