ಬೆಂಗಳೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಯೊಂದರ ಮೇಲೆ ಗುರುವಾರ ದಾಳಿ ನಡೆಸಿದ ಸಂಜಯನಗರ ಠಾಣೆ ಪೊಲೀಸರು ಕಿರುತರೆ ನಟಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರಲ್ಲಿ ಮೂವರು ಮಹಿಳೆಯರು ಸೇರಿದ್ದು, ಪಾರ್ಥ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂಜಯನಗರದ ಲೊಟ್ಟೆಗೊಲ್ಲನಹಳ್ಳಿಯ ಎರಡನೇ ಅಡ್ಡ ರಸ್ತೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯಿಂದ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ. ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.