ADVERTISEMENT

ವೈಟ್‌ ಟಾಪಿಂಗ್‌ ಕಾಮಗಾರಿಗೆ 9ರಂದು ಚಾಲನೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2017, 19:30 IST
Last Updated 5 ಅಕ್ಟೋಬರ್ 2017, 19:30 IST
ವೈಟ್‌ ಟಾಪಿಂಗ್‌ ಕಾಮಗಾರಿಗೆ  9ರಂದು ಚಾಲನೆ
ವೈಟ್‌ ಟಾಪಿಂಗ್‌ ಕಾಮಗಾರಿಗೆ 9ರಂದು ಚಾಲನೆ   

ಬೆಂಗಳೂರು: ನಗರದ ಪ್ರಮುಖ 29 ರಸ್ತೆಗಳನ್ನು ವೈಟ್‌ ಟಾಪಿಂಗ್‌ ಮಾಡುವ ಕಾಮಗಾರಿಯನ್ನು ಈ ತಿಂಗಳ ಎರಡನೇ ವಾರದಲ್ಲಿ ಆರಂಭಿಸಲು ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ.

‌₹800 ಕೋಟಿ ಅನುದಾನದಲ್ಲಿ ಆರು ಪ್ರಮುಖ ಜಂಕ್ಷನ್‌ಗಳು ಸೇರಿ 93.47 ಕಿ.ಮೀ ರಸ್ತೆಯನ್ನು ವೈಟ್‌ ಟಾಪಿಂಗ್‌ ಮಾಡುವ ಯೋಜನೆಯ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. ಗುತ್ತಿಗೆದಾರರಾದ ಎನ್‌.ಸಿ.ಸಿ. ಲಿಮಿಟೆಡ್‌ 39.80 ಕಿ.ಮೀ. ಮತ್ತು ಮಧುಕಾನ್‌ ಪ್ರಾಜೆಕ್ಟ್‌ ಲಿಮಿಟೆಡ್‌ 53.67 ಕಿ.ಮೀ. ರಸ್ತೆ ಕಾಮಗಾರಿ ನಿರ್ವಹಿಸಲಿವೆ.

ಹೊರವರ್ತುಲ ರಸ್ತೆ, ಮೈಸೂರು ರಸ್ತೆ, ಬ್ರಿಗೇಡ್‌ ರಸ್ತೆ, ಹೊಸೂರು ರಸ್ತೆ, ಬನ್ನೇರುಘಟ್ಟ ರಸ್ತೆ, ಸರ್ಜಾಪುರ ರಸ್ತೆ, ತುಮಕೂರು ರಸ್ತೆ ವೈಟ್‌ ಟಾಪಿಂಗ್‌ ರೂಪ ಪಡೆಯಲಿವೆ.

ADVERTISEMENT

‘ಅ.9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.‌ 2018ರ ಮಾರ್ಚ್ 31ರೊಳಗೆ ಕಾಮಗಾರಿ ಪೂರ್ಣಗೊಳಿಸಲು ಗಡುವು ನೀಡಲಾಗಿದೆ’ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ಕಾಮಗಾರಿ ಕೈಗೊಳ್ಳಬೇಕಿರುವ ರಸ್ತೆ ಭಾಗಗಳಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಲು  ಹೆಚ್ಚುವರಿ ಪೊಲೀಸ್‌ ಕಮಿಷನರ್‌ (ಸಂಚಾರ) ಜತೆ ಚರ್ಚಿಸಿ ಒಪ್ಪಿಗೆ ಪಡೆಯಲಾಗಿದೆ. ಹಗಲು ಮತ್ತು ರಾತ್ರಿ ಎರಡು ಪಾಳಿಗಳಲ್ಲಿ ಕಾಮಗಾರಿ ನಡೆಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.