ADVERTISEMENT

ವೈದ್ಯರಿಗೆ ಕರೆ ಮಾಡಿದ ಅಂಬರೀಷ್‌

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2014, 20:08 IST
Last Updated 14 ಮಾರ್ಚ್ 2014, 20:08 IST

ಬೆಂಗಳೂರು:  ಸಿಂಗಪುರದ ಮೌಂಟ್‌ ಎಲಿಜಬೆತ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ, ವಸತಿ ಸಚಿವ ಅಂಬರೀಷ್ ಅವರ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಂಡುಬಂದಿದ್ದು, ವಿಕ್ರಂ ಆಸ್ಪತ್ರೆಯ ವೈದ್ಯರೊಂದಿಗೆ ಅಂಬರೀಷ್‌ ಅವರೇ  ದೂರವಾಣಿಯ ಮೂಲಕ ಮಾತನಾಡಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಈ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯ ಡಾ.ಕೆ.ಎಸ್‌.ಸತೀಶ್‌, ‘ ಅಂಬರೀಷ್‌ ಅವರ ಶ್ವಾಸಕೋಶದ ಸೋಂಕು ಗಣನೀಯವಾಗಿ ಕಡಿಮೆಯಾಗಿದ್ದು, ಅವರು ಸಹಜ ಸ್ಥಿತಿಗೆ ಮರಳಿದ್ದಾರೆ. ಅಲ್ಲದೇ ನನ್ನೊಂದಿಗೆ ಶುಕ್ರವಾರ ಬೆಳಿಗ್ಗೆ ಅವರೇ ಪೋನಿನಲ್ಲಿ ಮಾತನಾಡಿದರು’ ಎಂದು ಹೇಳಿದರು.

‘ವಿಶೇಷ ವಾರ್ಡ್‌ನಲ್ಲಿಯೇ ವಿಶ್ರಾಂತಿ ಪಡೆಯುತ್ತಿರುವ ಅವರು ವಾರ್ಡ್‌ನ ಆವರಣದಲ್ಲಿ ವಾಕಿಂಗ್‌ ಮಾಡುವಷ್ಟು ಸಶಕ್ತರಾಗಿದ್ದಾರೆ. 15 ದಿನದ ಒಳಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿ, ಮನೆಗೆ ಮರಳುವ ಸಾಧ್ಯತೆಯಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.