ಬೆಂಗಳೂರು: ನಗರದ ಫೋರ್ಟಿಸ್ ಆಸ್ಪತ್ರೆಯಲ್ಲಿ 2010ರ ಮೇ 6ರಂದು, ವೈದ್ಯರ ನಿರ್ಲಕ್ಷ್ಯದ ಕಾರಣ ರೋಗಿಯೊಬ್ಬರು ಮೃತಪಟ್ಟಿದ್ದಾರೆ ಎಂಬ ಆರೋಪ ಕುರಿತು ಲೋಕಾಯುಕ್ತ ವರದಿ ಆಧರಿಸಿ, ಹೊಸದಾಗಿ ತನಿಖೆ ನಡೆಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಮಂಗಳವಾರ ಆದೇಶಿಸಿದೆ.
ಮೂತ್ರಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಮೇಜರ್ (ನಿವೃತ್ತ) ಪಂಕಜ್ ರೈ ಅವರ ಪತ್ನಿ ಸೀಮಾ ರೈ ಎಂಬುವರು ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದ ಕಾರಣ ಮೃತಪಟ್ಟರು ಎಂದು ಆರೋಪಿಸಲಾಗಿದೆ.
ಆಸ್ಪತ್ರೆಯು ಜಠರ ಮತ್ತು ಮೇದೋಜ್ಜೀರಕಕ್ಕೆ ಸಂಬಂಧಿಸಿದ ಕೆಲವು ನಿರ್ದಿಷ್ಟ ಶಸ್ತ್ರಚಿಕಿತ್ಸೆಗಳನ್ನು ನಡೆಸುವಂತಿಲ್ಲ ಎಂದು ಹೈಕೋರ್ಟ್ನ ಏಕಸದಸ್ಯ ಪೀಠ ನೀಡಿರುವ ಆದೇಶ ಪ್ರಶ್ನಿಸಿ, ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಸಲ್ಲಿಸಿರುವ ಮೇಲ್ಮನವಿ ಇದಾಗಿದೆ. ನ್ಯಾಯಮೂರ್ತಿ ಎನ್. ಕುಮಾರ್ ನೇತೃತ್ವದ ವಿಭಾಗೀಯ ಪೀಠ ಇದರ ವಿಚಾರಣೆ ನಡೆಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.