ADVERTISEMENT

ವೈದ್ಯ ಸಂಘಕ್ಕೆ ನಿವೇಶನ ಭರವಸೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2013, 19:59 IST
Last Updated 4 ಆಗಸ್ಟ್ 2013, 19:59 IST
ನೆಲಮಂಗಲದ ಭಾರತೀಯ ವೈದ್ಯ ಸಂಘವು ಲಯನ್ ಸಂಸ್ಥೆಯ ಸಹಯೋಗದಲ್ಲಿ ಈಚೆಗೆ ಏರ್ಪಡಿಸಿದ್ದ ವೈದ್ಯರ ದಿನಾಚಾರಣೆಯಲ್ಲಿ ಮಕ್ಕಳತಜ್ಞ ಡಾ.ಎನ್.ಪಿ.ವಿನಯ್‌ಕುಮಾರ್ ಮತ್ತು ಡಾ.ಬಿ.ಸಿ.ಸುನೀತ ದಂಪತಿಗೆ ಬಿ.ಸಿ.ರಾಯ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಿದ್ವಾಯಿ ಆಸ್ಪತ್ರೆಯ ಡಾ.ಎಲ್.ಅಪ್ಪಾಜಿ, ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ಸಂಘದ ಅಧ್ಯಕ್ಷ ಡಾ.ಎಂ.ಜಯಪ್ರಸಾದ್ ಮತ್ತಿತರರು ಇದ್ದಾರೆ

ನೆಲಮಂಗಲ: `ಸ್ಥಳೀಯ ಭಾರತೀಯ ವೈದ್ಯ ಸಂಘಕ್ಕೆ ನಿವೇಶನ ಮಂಜೂರು ಮಾಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು' ಎಂದು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಭರವಸೆ ನೀಡಿದರು.

ಭಾರತೀಯ ವೈದ್ಯ ಸಂಘವು ಲಯನ್ ಸಂಸ್ಥೆಯ ಸಹಯೋಗದಲ್ಲಿ ಈಚೆಗೆ ಏರ್ಪಡಿಸಿದ್ದ ವೈದ್ಯರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ವೈದ್ಯ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಎ.ನಾಗರಾಜು, `ವೈದ್ಯರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ಮುಕ್ತ ಮನಸ್ಸಿನ ಸೇವೆ ಸಲ್ಲಿಸುವ ವಾತಾವರಣ ನಿರ್ಮಾಣವಾಗಬೇಕು' ಎಂದರು.

  ಬೆಂಗಳೂರು ಶಾಖೆಯ ಅಧ್ಯಕ್ಷ ಡಾ.ವಿ.ಸಿ ಷಣ್ಮುಗಾನಂದನ್, ಲಯನ್ ಸಂಸ್ಥೆಯ ಅಧ್ಯಕ್ಷ ಡಾ.ಎಸ್.ರವಿ, ಸ್ಥಳೀಯ ಸಂಘದ ಅಧ್ಯಕ್ಷ ಡಾ.ಎಂ.ಜಯಪ್ರಸಾದ್ ವೈದ್ಯರ ಸವಾಲುಗಳ ಬಗ್ಗೆ ಚರ್ಚಿಸಿದರು.

ಮಕ್ಕಳ ತಜ್ಞಡಾ.ಎನ್.ಪಿ.ವಿನಯ್‌ಕುಮಾರ್, ಡಾ.ಬಿ.ಸಿ.ಸುನೀತ ದಂಪತಿಗೆ ಮತ್ತು ಕಿದ್ವಾಯಿ ಆಸ್ಪತ್ರೆಯ ಡಾ.ಎಲ್.ಅಪ್ಪಾಜಿ ಅವರಿಗೆ ಬಿ.ಸಿ.ರಾಯ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.