ಬೆಂಗಳೂರು: ನಟ ಜಗ್ಗೇಶ್ ನಗರದ ಮಲ್ಲೇಶ್ವರಂನಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೊ ಸಂಬಂಧ ಜಗ್ಗೇಶ್ ಸ್ಪಷ್ಟನೆ ನೀಡಿದ್ದಾರೆ.
ನಡೆದ ಘಟನೆ ಪರಾಮರ್ಶಿಸದೆಯೇ ನನ್ನ ಬಗ್ಗೆ ತಪ್ಪು ಸಂದೇಶ ಸಾರುವ ಹೇಳಿಕೆಯೊಂದಿಗೆ ವಿಡಿಯೊ ನೀಡಿರುವವರ ವಿರುದ್ಧ ಸೈಬರ್ ಕ್ರೈಂಗೆ ದೂರು ನೀಡಿ ಕಾನೂನಾತ್ಮಕವಾಗಿ ಉತ್ತರಿಸುತ್ತೇನೆ ಎಂದು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.