ADVERTISEMENT

ಶಬ್ದ ಮಾಲಿನ್ಯ ಇಲ್ಲದೆಯೇ ಕಟ್ಟಡ ಕಾಮಗಾರಿ ಕೈಗೊಳ್ಳುವುದು ಹೇಗೆ ಸಾಧ್ಯ ?

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2012, 18:50 IST
Last Updated 4 ಅಕ್ಟೋಬರ್ 2012, 18:50 IST

ಬೆಂಗಳೂರು: ಶಬ್ದ ಮಾಲಿನ್ಯ ಮಾಡದೆ, ಕಟ್ಟಡ ನಿರ್ಮಾಣ ಕಾಮಗಾರಿ ನಡೆಸಲು ಹೇಗೆ ಸಾಧ್ಯ ಎಂದು ಶೋಭಾ ಬಿಲ್ಡರ್ಸ್‌ನಿಂದ ಸ್ಪಷ್ಟನೆ ಕೋರಿರುವ ಹೈಕೋರ್ಟ್, ಸಾಯಂಕಾಲ 6 ಗಂಟೆಯ ನಂತರ, ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಾರದು ಎಂಬ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.

ರಾತ್ರಿ ಸಮಯದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳುವುದನ್ನು ನಿಷೇಧಿಸಿ ಹೊರಡಿಸಿದ್ದ ಆದೇವನ್ನು  ರದ್ದು ಮಾಡುವಂತೆ ಕೋರಿ ಶೋಭಾ ಬಿಲ್ಡರ್ಸ್ ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ನಡೆಸುತ್ತಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.