ADVERTISEMENT

ಶಬ್ದ ಮಾಲಿನ್ಯ: ನೋಟಿಸ್

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 20:29 IST
Last Updated 6 ಸೆಪ್ಟೆಂಬರ್ 2013, 20:29 IST

ಬೆಂಗಳೂರು: ನಗರದಲ್ಲಿ ಶಬ್ದ ಮಾಲಿನ್ಯ ಮಿತಿ ಮೀರುತ್ತಿದೆ ಎಂದು ಪತ್ರಿಕೆಯೊಂದರಲ್ಲಿ ಪ್ರಕಟವಾದ ವರದಿ ಆಧರಿಸಿ ಹೈಕೋರ್ಟ್, ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಿಸಿಕೊಂಡಿದೆ.

ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ), ನಗರ ಪೊಲೀಸ್ ಆಯುಕ್ತರು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ನೋಟಿಸ್ ನೀಡಲು ಶುಕ್ರವಾರ ಆದೇಶಿಸಿದೆ.

`ನಗರದಲ್ಲಿ ಕೆಲವೆಡೆ ಶಬ್ದ ಮಾಲಿನ್ಯ ಹೆಚ್ಚಾಗುತ್ತಿದೆ ಎಂಬ ವರದಿ ನೋಡಿದ್ದೇವೆ. ಶಬ್ದ ಮಾಲಿನ್ಯ ನಿಯಂತ್ರಣದಲ್ಲಿ ಇಡಲು ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಿದೆ. ಈ ನಿಟ್ಟಿನಲ್ಲಿ ಸ್ವಯಂಪ್ರೇರಿತವಾಗಿ ಪಿಐಎಲ್ ದಾಖಲಿಸಿಕೊಳ್ಳಲಾಗಿದೆ' ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.