ADVERTISEMENT

ಶಾಲಾ ಕಟ್ಟಡಗಳ ಅಭಿವೃದ್ಧಿಗೆ ಆದ್ಯತೆ: ಶಾಸಕ ಪ್ರಿಯಕೃಷ್ಣ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2012, 20:23 IST
Last Updated 4 ಡಿಸೆಂಬರ್ 2012, 20:23 IST

ಕೆಂಗೇರಿ: ಪ್ರಾಥಮಿಕ ಹಂತದಲ್ಲಿ ಶಿಕ್ಷಣ ಕಲಿಯುವ ಮಕ್ಕಳಿಗೆ ಉತ್ತಮ ಕಟ್ಟಡದ ಅವಶ್ಯಕತೆ ಇರುವುದರಿಂದ ನಾಯಂಡಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 1.24 ಲಕ್ಷ ರೂಪಾಯಿ ವೆಚ್ಚದಲ್ಲಿ  ಸುಸಜ್ಜಿತವಾದ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಶಾಸಕ ಪ್ರಿಯಕೃಷ್ಣ ತಿಳಿಸಿದರು.ಗೋವಿಂದರಾಜನಗರ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ಪ್ರಾಥಮಿಕ ಹಂತದ ಸರ್ಕಾರಿ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾಭ್ಯಾಸಕ್ಕೆ ಉತ್ತಮ ಆದ್ಯತೆ ನೀಡುವ ಉದ್ದೇಶದಿಂದಲೇ ಕ್ಷೇತ್ರದಲ್ಲಿ ಶಾಲಾ ಕಟ್ಟಡಗಳನ್ನು ಅಭಿವೃದ್ಧಿಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದು  ಹಂತ ಹಂತವಾಗಿ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರೌಢಶಾಲೆಯನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಪೋಷಕರು ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು. ಮುಖಂಡರಾದ ಕೃಷ್ಣಪ್ಪ, ಸತೀಶ್, ಭೈರಪ್ಪ ಉಪಸ್ಥಿತರಿದ್ದರು.

ಹೊಸಕೋಟೆ ಬಳಿ ಅಪರಿಚಿತ ಶವ ಪತ್ತೆ
ಹೊಸಕೋಟೆ:
ಮಾಲೂರು ರಸ್ತೆಯಲ್ಲಿ ಅಪರಿಚಿತ ಗಂಡಸಿನ ಶವವೊಂದು ಮಂಗಳವಾರ ಪತ್ತೆಯಾಗಿದೆ. ಸುಮಾರು 55 ವರ್ಷ ವಯಸ್ಸಿನ ಆ ವ್ಯಕ್ತಿ ನಶ್ಯ ಬಣ್ಣದ ಅರ್ಧ ತೋಳಿನ ಅಂಗಿ, ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದ. ಆತ ಯಾವುದೋ ಕಾಯಿಲೆಯಿಂದ ಸತ್ತಿರಬಹುದು ಎಂದು ಶಂಕಿಸಲಾಗಿದೆ. ಶವವನ್ನು ಎಂವಿಜೆ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.