ADVERTISEMENT

ಶಾಲಾ ಮಕ್ಕಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2013, 19:40 IST
Last Updated 8 ಜೂನ್ 2013, 19:40 IST

ವೈಟ್‌ಫೀಲ್ಡ್: `ಶಾಲೆಗಳು ಸಾಮಾಜಿಕ ಶಕ್ತಿ ಕೇಂದ್ರಗಳಾಗಿ ಪರಿವರ್ತನೆಯಾದರೆ ಮಾತ್ರ ಶೈಕ್ಷಣಿಕ ಅಭಿವೃದ್ಧಿ ಸಾಧ್ಯ' ಎಂದು ಜನರಲ್ ಮೋಟಾರ್ಸ್‌ ಕಂಪೆನಿಯ ಅಧ್ಯಕ್ಷ ಲೋವೆಲ್ ಪೆಡಾಕ್ ಅಭಿಪ್ರಾಯಪಟ್ಟರು.

ಗುಂಜೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಉಚಿತ ಶೈಕ್ಷಣಿಕ ಕಿಟ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

`ಈ ಶಾಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು ಖಾಸಗಿ ಶಾಲೆಗಳಿಗೆ ಮಾದರಿ ಆಗಬೇಕು' ಎಂದು ಅವರು ಕಿವಿಮಾತು ಹೇಳಿದರು.

ಸಂಸ್ಥೆಯ ಉಪಾಧ್ಯಕ್ಷ ರಿಯಾನ್ ಬೌರ್ ಮಾತನಾಡಿ, `ಗ್ರಾಮೀಣ ಭಾಗದ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಕಳೆದ ಮೂರು ವರ್ಷಗಳಿಂದ ಹೆಚ್ಚಿನ ಸಹಕಾರ ನೀಡಲಾಗುತ್ತಿದೆ. ಈ ವರ್ಷ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 687 ವಿದ್ಯಾರ್ಥಿಗಳಿಗೆ ಒಟ್ಟು ರೂ5.60 ಲಕ್ಷದ ಕಿಟ್ ವಿತರಿಸಲಾಗಿದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.