ADVERTISEMENT

ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2011, 18:55 IST
Last Updated 6 ಮಾರ್ಚ್ 2011, 18:55 IST

ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ನಗರದ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಜೆ.ಎನ್.ಟಾಟಾ ಸಭಾಂಗಣದಲ್ಲಿ ಶುಕ್ರವಾರ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ, ಪೋಸ್ಟರ್ ಸ್ಪರ್ಧೆ ಮತ್ತು ಚಿತ್ರ ರಚಿಸುವ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಸಮಾರಂಭವನ್ನು ಪ್ರಾಧ್ಯಾಪಕ ಹಾಗೂ ಐಐಎಸ್‌ಸಿಯ ರಾಮಣ್ಣ ಫೆಲೊ ಪ್ರೊ.ಕೆ.ಜೆ.ರಾವ್ ಉದ್ಘಾಟಿಸಿ ರಸಾಯನಶಾಸ್ತ್ರದ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು.

ವಿಜ್ಞಾನ ದಿನಾಚರಣೆ ಅಂಗವಾಗಿ ‘ಮೋಜಿನೊಂದಿಗೆ ರಸಾಯನಶಾಸ್ತ್ರ’ ಎಂಬ ವಿಷಯದ ಕುರಿತು ಐಐಎಸ್‌ಸಿಯ ಪ್ರಾಧ್ಯಾಪಕ ಪ್ರೊ.ಎ.ಎಂ.ಉಮರ್ಜಿ, ‘ಚಂದ್ರಯಾನ’ ಕುರಿತು ಇಸ್ರೋ ಅಧಿಕಾರಿ ಬಿ.ಆರ್.ಗುರುಪ್ರಸಾದ್ ಮತ್ತು ‘ನೈಸರ್ಗಿಕ ವಿಪತ್ತುಗಳು’ ಕುರಿತು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿ ವಿ.ಎಸ್.ಪ್ರಕಾಶ್ ಅವರು ಉಪನ್ಯಾಸ ನೀಡಿದರು.

ನವದೆಹಲಿಯ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿಯ ನಿರ್ದೇಶಕ ಡಾ.ಮನೋಜ್ ಕೆ.ಪಟಾರಿಯಾ, ಐಐಎಸ್‌ಸಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿ.ಕೆ.ರಘುಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ನಗರದ ವಿವಿಧೆಡೆಗಳಿಂದ ಸುಮಾರು 800 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.