ADVERTISEMENT

ಶಾಲೆಗಳಿಗೆ ಸ್ವೀಡನ್ ಶಿಕ್ಷಕರ ಒಕ್ಕೂಟ ಭೇಟಿ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2013, 20:01 IST
Last Updated 10 ಡಿಸೆಂಬರ್ 2013, 20:01 IST
ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಥಣಿಸಂದ್ರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಂಟಿ ಸಹಭಾಗಿತ್ವದಲ್ಲಿ ಭೇಟಿ ನೀಡಿದ್ದ, ಸ್ವೀಡನ್‌ ದೇಶದ ‘ಲಾರಾರ್‌ ಫಾರ್‌ಬಂಡೆಟ್‌’ ಶಿಕ್ಷಕರ ಒಕ್ಕೂಟದ ಅಂತರರಾಷ್ಟ್ರೀಯ ಕಾರ್ಯದರ್ಶಿ ಹೆನ್ರಿಕ್‌ ಹರ್‌ಬರ್‌ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿದರು

ಯಲಹಂಕ: ರಾಜ್ಯದ ಸರ್ಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿಯನ್ನು ಅವಲೋಕನ ಮಾಡುವ ದೃಷ್ಟಿಯಿಂದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಂಟಿ ಸಹಭಾಗಿತ್ವದಲ್ಲಿ ಸ್ವೀಡನ್‌ ದೇಶದ ‘ಲಾರಾರ್‌ ಫಾರ್‌ಬಂಡೆಟ್‌’ ಶಿಕ್ಷಕರ ಒಕ್ಕೂಟದ ಅಂತರರಾಷ್ಟ್ರೀಯ ಕಾರ್ಯದರ್ಶಿ ಹೆನ್ರಿಕ್‌ ಹರ್‌ಬರ್‌ ನೇತೃತ್ವದ ತಂಡ ಥಣಿಸಂದ್ರ ಹಾಗೂ ರಾಚೇನಹಳ್ಳಿ ಸರ್ಕಾರಿ ಶಾಲೆಗಳಿಗೆ ಮಂಗಳವಾರ ಭೇಟಿ ನೀಡಿತು.

ಈ ಸಂದರ್ಭದಲ್ಲಿ ನಿಯೋಗ ಮತ್ತು ಶಿಕ್ಷಕರೊಂದಿಗೆ ನಡೆದ ಸಂವಾದದಲ್ಲಿ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವುದು, ಮೂಲಭೂತ ಸೌಕರ್ಯಗಳ ಕೊರತೆ, ಶಿಕ್ಷಣದ ಪ್ರಗತಿ, ಏಕರೂಪ ಸಮಾನ ಶಿಕ್ಷಣವನ್ನು ಜಾರಿಗೆ ತರುವ ಬಗ್ಗೆ  ಚರ್ಚೆ ನಡೆಯಿತು.
ಸಂಘದ ರಾಜ್ಯಘಟಕದ ಅಧ್ಯಕ್ಷ ಬಸವರಾಜ ಗುರಿಕಾರ, ಪ್ರಧಾನ ಕಾರ್ಯದರ್ಶಿ ವಿ.ಎಂ.ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.