ADVERTISEMENT

ಶಾಸಕರ ತಲೆಗೆ ಪೆಟ್ಟು

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2011, 19:30 IST
Last Updated 20 ಸೆಪ್ಟೆಂಬರ್ 2011, 19:30 IST

ನಾಗಮಂಗಲ (ಮಂಡ್ಯ): ಗಣಪತಿ ವಿಜರ್ಸನೆ ವೇಳೆ ದುಷ್ಕರ್ಮಿಗಳು ಕಲ್ಲು ತೂರಿದ ಪರಿಣಾಮ ನಾಗಮಂಗಲ ಶಾಸಕ ಸುರೇಶ್ ಗೌಡ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದೆ.

ಮಂಗಳವಾರ ರಾತ್ರಿ ಹನ್ನೊಂದರ ಸುಮಾರಿಗೆ ಬಿಂಡಿಗೆನವಿಲೆ ಹೋಬಳಿ ಬಿದರಕೆರೆಯಲ್ಲಿ ಗಣಪತಿ ವಿಸರ್ಜನೆ ಕಾರ್ಯಕ್ರಮಕ್ಕೆ ಶಾಸಕರು ಹೋಗಿದ್ದರು. ಸಭಾ ಕಾರ್ಯಕ್ರಮ ಮುಗಿದ ತಕ್ಷಣ ಜನರು ಗಣಪತಿ ಮೂರ್ತಿಯನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೊರಟರು.

ಒಂದಿಷ್ಟು ದೂರ ಸಾಗಿದ್ದಾಗಲೇ ದುಷ್ಕರ್ಮಿಗಳು ಶಾಸಕರತ್ತ ಕಲ್ಲು ತೂರಲು ಆರಂಭಿಸಿದರು. ಅದರಲ್ಲಿ ಒಂದೆರಡು ಕಲ್ಲು ಶಾಸಕರ ತಲೆ ಹಾಗೂ ದೇಹಕ್ಕೆ ತಾಗಿದ ಪರಿಣಾಮ ಗಾಯವಾಯಿತು. ತಕ್ಷಣವೇ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಶಾಸಕರನ್ನು ಸಮೀಪ ಇರುವ ಆದಿಚುಂಚನಗಿರಿ ಆಸ್ಪತ್ರೆಗೆ ಸೇರಿಸಲಾಗಿದೆ. ತಲೆಗೆ ಮೂರು ಹೊಲಿಗೆ ಹಾಕಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಸಂತೋಷ್ ಎಂಬಾತನನ್ನು  ಪೊಲೀಸರು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.