ಬೆಂಗಳೂರು: ‘ಚುನಾವಣಾ ಪ್ರಮಾಣ ಪತ್ರದಲ್ಲಿ ಅಸರ್ಮಕ ಮಾಹಿತಿ ಒದಗಿಸಲಾಗಿದೆ ಎಂದು ಆರೋಪಿಸಿ ನನ್ನ ವಿರುದ್ಧ ದಾಖಲಿಸಿರುವ ಚುನಾವಣಾ ತಕರಾರು ಅರ್ಜಿ ರದ್ದುಗೊಳಿಸಬೇಕು’ ಎಂದು ಕೋರಿ ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜು ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಈ ಕುರಿತ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ರವಿ ಮಳಿಮಠ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಮೂಲ ಅರ್ಜಿಯನ್ನು ಕಲಾಪದ ಪ್ರತಿದಿನವೂ ವಿಚಾರಣೆ ನಡೆಸುವುದಾಗಿ ತಿಳಿಸಿ ಇದೇ 17ಕ್ಕೆ ಮುಂದೂಡಿತು.
ಮೂಲ ಅರ್ಜಿ: ‘2018ರ ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಬಸವರಾಜು, ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿತಮ್ಮ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಗಳು, ಸ್ಥಿರಾಸ್ತಿ, ಶೈಕ್ಷಣಿಕ ಅರ್ಹತೆ ಬಗ್ಗೆ ಅಸಮರ್ಪಕ ಮಾಹಿತಿ ಒದಗಿಸಿದ್ದಾರೆ. ಹಾಗಾಗಿ ಅವರ ಆಯ್ಕೆ ಅಸಿಂಧುಗೊಳಿಸಬೇಕು’ ಎಂಬುದು ಮೂಲ ಅರ್ಜಿದಾರ ಡಿ.ಎ. ಗೋಪಾಲ್ ಅವರ ಕೋರಿಕೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.