ADVERTISEMENT

`ಶಾಸ್ತ್ರೀಯ ನೃತ್ಯ: ಹೊಸ ಸಂಶೋಧನೆ ಅಗತ್ಯ'

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2013, 19:30 IST
Last Updated 17 ಫೆಬ್ರುವರಿ 2013, 19:30 IST
ನೂಪುರ ಭ್ರಮರಿ ನೃತ್ಯ ಸಂಶೋಧಕರ ಚಾವಡಿ, ಭಾರತೀಯ ವಿದ್ಯಾಭವನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ `ಅಖಿಲ ಭಾರತೀಯ ನೃತ್ಯ ಸಂಶೋಧನಾ ಸಮ್ಮೇಳನದ ಸಮಾರೋಪ ಸಮಾರಂಭ' ದಲ್ಲಿ ಸಂಸದ ಅನಂತಕುಮಾರ್ ಮತ್ತು ಅದಮ್ಯ ಚೇತನ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರು  ವಿದ್ವಾನ್ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್.ಎನ್. ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಎಂ.ಕಾರಜೋಳ ಇದ್ದಾರೆ

ಬೆಂಗಳೂರು: ಶಾಸ್ತ್ರೀಯ ನೃತ್ಯಗಳಲ್ಲಿ ಹೊಸ-ಹೊಸ ಸಂಶೋಧನೆಗಳನ್ನು ಕೈಗೊಳ್ಳಬೇಕು. ಇಂತಹ ಸಂಶೋಧನೆಗಳಿಗೆ ಸರ್ಕಾರ ಪ್ರೋತ್ಸಾಹವನ್ನು ನೀಡಬೇಕು ಎಂದು ಸಂಸದ ಅನಂತಕುಮಾರ್ ಹೇಳಿದರು.

ನೂಪುರ ಭ್ರಮರಿ ನೃತ್ಯ ಸಂಶೋಧಕರ ಚಾವಡಿ, ಭಾರತೀಯ ವಿದ್ಯಾಭವನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ `ಅಖಿಲ ಭಾರತೀಯ ನೃತ್ಯ ಸಂಶೋಧನಾ  ಸಮ್ಮೇಳನದ ಸಮಾರೋಪ ಸಮಾರಂಭ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯದ ವಿವಿಧ ಶಾಲಾ ಕಾಲೇಜುಗಳ ಬಯಲು ರಂಗಮಂದಿರಗಳಲ್ಲಿ ಕರ್ನಾಟಕ ಶಾಸ್ತ್ರೀಯ ನೃತ್ಯಗಳು ಪ್ರದರ್ಶನವಾಗಬೇಕು. ಈ ಪ್ರದರ್ಶನಗಳು ನಮ್ಮ ಯುವಜನತೆಗೆ ಸ್ಫೂರ್ತಿದಾಯಕವಾಗಬೇಕು ಎಂದು ಹೇಳಿದರು.

ನಮ್ಮ ರಾಜ್ಯದ ಐಹೊಳೆ, ಬಾದಾಮಿ, ಪಟ್ಟದಕಲ್ಲು, ಹಂಪಿ, ಬೇಲೂರು, ಹಳೇಬೀಡು ಇವು ನಮ್ಮ ಸಾಂಸ್ಕೃತಿಕ ಕ್ಷೇತ್ರಗಳು. ಇವುಗಳನ್ನು ಶಾಸ್ತ್ರೀಯ ನೃತ್ಯದ ವೇದಿಕೆಗಳನ್ನಾಗಿ ಪರಿವರ್ತಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶ್ರೇಷ್ಠ ನೃತ್ಯ ವಿಮರ್ಶಾ ಪ್ರಶಸ್ತಿ-2012 `ವಿಮರ್ಶಾ ವಾಙ್ಮಯಿ' ಪ್ರಶಸ್ತಿಯನ್ನು ವಿದ್ವಾನ್ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಅವರಿಗೆ ನೀಡಿ ಸನ್ಮಾನಿಸಲಾಯಿತು. ಭರತನಾಟ್ಯ ನೃತ್ಯ ತಂಡಗಳು ಸಂಶೋಧನಾಧಾರಿತವಾದ ನೃತ್ಯ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.