ADVERTISEMENT

ಶಿಕ್ಷಕರನ್ನು ಸದಾ ಕಾಲ ಗೌರವದಿಂದ ಕಾಣಬೇಕು

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2012, 19:30 IST
Last Updated 7 ಅಕ್ಟೋಬರ್ 2012, 19:30 IST

ಮಹದೇವಪುರ: `ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಶಿಕ್ಷಕರನ್ನು ಸರ್ವರೂ ಸದಾಕಾಲ ಗೌರವದಿಂದ ಕಾಣಬೇಕು~ ಎಂದು ಕೆಪಿಸಿಸಿ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್ ಸಲಹೆ ಮಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸೇವಾ ಸಮಿತಿಯು ಭಾನುವಾರ ಕ್ಷೇತ್ರದ ಕಾಡುಗೋಡಿಯ ದಿನ್ನೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಬೆಂಗಳೂರು ಪೂರ್ವ ತಾಲ್ಲೂಕಿನ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

`ಈ ಹಿಂದೆ ಸರ್ಕಾರಿ ಶಿಕ್ಷಕರಿಗೆ ಇದ್ದಂತಹ ಗೌರವ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ಶಿಕ್ಷಣ ವ್ಯವಸ್ಥೆ ವ್ಯಾಪಾರೀಕರಣಗೊಂಡಿರುವುದು ಇದಕ್ಕೆ ಮುಖ್ಯ ಕಾರಣ. ಏನೇ ಆದರೂ ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸುತ್ತಿರುವುದು ಅಭಿನಂದನೀಯ~ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಘಟಕದ ಅಧ್ಯಕ್ಷ ಪಿ.ಕೆ.ಜಯಚಂದ್ರರೆಡ್ಡಿ ಮಾತನಾಡಿ, ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡುವ ಶಿಕ್ಷಕರು ದೇಶದ ಆಸ್ತಿ ಎಂದರು. ಕ್ಷೇತ್ರ ಸಮಯನ್ವಯಾಧಿಕಾರಿ ಕೃಷ್ಣಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ಸಿ.ಹರಿಪ್ರಸಾದ್ ಉಪಸ್ಥಿತರಿದ್ದರು.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT