ಯಲಹಂಕ: ಮಕ್ಕಳು ಉತ್ತಮ ಪ್ರಜೆಗಳಾದಾಗ ಮಾತ್ರ ದೇಶದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರವನ್ನು ಮಟ್ಟಹಾಕಲು ಸಾಧ್ಯ ಎಂದು ಶಾಸಕ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು. ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಸೊಣ್ಣಪ್ಪನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸರ್ಕಾರದಿಂದ ಮಂಜೂರಾಗಿದ್ದ ಬೈಸಿಕಲ್ ವಿತರಿಸಿ ಅವರು ಮಾತನಾಡಿದರು.
`ಶಿಕ್ಷಕರು ಮಕ್ಕಳಿಗೆ ಕೇವಲ ಪಾಠ ಹೇಳಿದರೆ ಸಾಲದು. ಮೌಲ್ಯಗಳನ್ನು ಹೇಳಿಕೊಡುವ ಮೂಲಕ ಅವರನ್ನು ಗುಣವಂತರು ಹಾಗೂ ಚಾರಿತ್ರ್ಯವಂತರನ್ನಾಗಿ ರೂಪಿಸಬೇಕು~ ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಶುಭಾ ನರಸಿಂಹಮೂರ್ತಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮಿ ರಮೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಕುಂತಲಮ್ಮ, ಸದಸ್ಯರಾದ ಮಧು, ರಮೇಶ್, ಮಾಜಿ ಅಧ್ಯಕ್ಷ ಎಸ್.ಕೆ.ಆಂಜಿನಪ್ಪ, ಮುಖ್ಯ ಶಿಕ್ಷಕ ವೆಂಕಟೇಗೌಡ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.