ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ವರ್ಗಾವಣೆ ಬಯಸುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಶಿಕ್ಷಕರ ವೃಂದದ ಅಧಿಕಾರಿಗಳು, ವಿಷಯ ಪರಿವೀಕ್ಷಕರು (ವೃತ್ತಿ) ಇದೇ 12ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಶಿಕ್ಷಕರ ವರ್ಗಾವಣೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಬೆಂಗಳೂರಿನಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ, ಗುಲ್ಬರ್ಗ ಮತ್ತು ಧಾರವಾಡದ ಹೆಚ್ಚುವರಿ ಆಯುಕ್ತ ಕಚೇರಿ, ಶಿಕ್ಷಣ ಇಲಾಖೆಯ ಸಹ ನಿರ್ದೇಶಕರ ಕಚೇರಿ, ಆಯಾ ಜಿಲ್ಲಾ ಉಪ ನಿರ್ದೇಶಕರ (ಆಡಳಿತ) ಕಚೇರಿ ಮತ್ತು ರಾಜ್ಯದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಪಡೆಯಬಹುದು. ಅಲ್ಲದೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಮಾಹಿತಿ ಲಭ್ಯವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.