ADVERTISEMENT

`ಶಿಕ್ಷಣದಿಂದ ಸುಸಂಸ್ಕೃತನಾಗುವ ಮನುಷ್ಯ'

​ಪ್ರಜಾವಾಣಿ ವಾರ್ತೆ
Published 14 ಜುಲೈ 2013, 19:32 IST
Last Updated 14 ಜುಲೈ 2013, 19:32 IST

ಬೆಂಗಳೂರು:  `ಶಿಕ್ಷಣ ಮತ್ತು ಜೀವನ ಒಂದೇ ನಾಣ್ಯದ ಎರಡು ಮುಖಗಳು. ಮನುಷ್ಯ ಶಿಕ್ಷಣದಿಂದ ಸುಸಂಸ್ಕೃತ ವ್ಯಕ್ತಿಯಾಗುತ್ತಾನೆ' ಎಂದು ಶಾಸಕ ರವಿ ಸುಬ್ರಹ್ಮಣ್ಯ ಹೇಳಿದರು.

ಬನಶಂಕರಿ 3 ನೇ ಹಂತದ ಶ್ರೀಕೃಷ್ಣ ಪಿಯು ಮತ್ತು ಪದವಿ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ 2013-14 ನೇ ಸಾಲಿನ ಮೊದಲ ವರ್ಷದ ಪದವಿ ತರಗತಿ ಆರಂಭ ಹಾಗೂ ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

`ಉತ್ತಮ ಶಿಕ್ಷಣವು ಒಂದು ದೇಶವನ್ನು ಬಲಗೊಳಿಸುತ್ತದೆ. ಹೀಗಾಗಿ ಛಲ ಬಿಡದೆ ಓದಿ ಸಾಧನೆಯ ಮಾರ್ಗವನ್ನು ಕಂಡುಕೊಳ್ಳಬೇಕು. ವಿದ್ಯಾರ್ಥಿಗಳು ಪರಿಶ್ರಮದಿಂದ ಓದಿ ತಮ್ಮ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಬೇಕು' ಎಂದರು.

`ವಿದ್ಯಾರ್ಥಿ ದೆಸೆಯಲ್ಲಿ ಶಿಕ್ಷಣವನ್ನು ನಿರ್ಲಕ್ಷಿಸಬಾರದು. ಕಷ್ಟಪಟ್ಟು ಓದಿದರೆ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಮೆದುಳನ್ನು ಖಾಲಿ ಬಿಡದೆ, ಅದಕ್ಕೆ ಜ್ಞಾನವನ್ನು ತುಂಬಬೇಕು' ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಶ್ರೀ ಕೃಷ್ಣ ಇಂಟರ್‌ನ್ಯಾಷನಲ್ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ.ಎಂ.ರುಕ್ಮಾಂಗದ ನಾಯ್ಡು ಮಾತನಾಡಿ, `ಮನುಷ್ಯನಿಗೆ ಶಿಕ್ಷಣದ ಜತೆಗೆ ಸಾಮಾನ್ಯ ಜ್ಞಾನವೂ ಮುಖ್ಯವಾಗುತ್ತದೆ. ಕಾಲೇಜು ಜೀವನ ಮುಗಿದ ನಂತರ ನಿಜವಾದ ಜೀವನ ಆರಂಭವಾಗುತ್ತದೆ. ಮುಂದಿನ ಜೀವನ ರೂಪಿಸಿಕೊಳ್ಳಲು ಈಗಿನಿಂದಲೇ ಪರಿಶ್ರಮ ಪಡಬೇಕು' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.