ADVERTISEMENT

ಶಿಕ್ಷಣ ವಂಚಿತರನ್ನು ಶಾಲೆಗೆ ಕರೆತನ್ನಿ

​ಪ್ರಜಾವಾಣಿ ವಾರ್ತೆ
Published 7 ಜುಲೈ 2012, 19:30 IST
Last Updated 7 ಜುಲೈ 2012, 19:30 IST

ಹೊಸಕೋಟೆ: `ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 94 ರಷ್ಟು ವಿದ್ಯಾರ್ಥಿಗಳು ಶಾಲಾ ಶಿಕ್ಷಣ ಪಡೆಯುತ್ತಿದ್ದಾರೆ. ಉಳಿದ ಶೇ. 6ರಷ್ಟು ಮಕ್ಕಳನ್ನು ಶಾಲೆಗೆ ಕರೆತರುವ ಕೆಲಸ ಆಗಬೇಕಿದೆ ಎಂದು ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ `ಶಾಲೆಗಾಗಿ ನಾವು-ನೀವು~ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿ ಶಂಕರನಾರಾಯಣ ಮಾತನಾಡಿ ಪೋಷಕರು, ಸಮುದಾಯ ಸರ್ಕಾರಿ ಶಾಲೆಗಳ ಜೊತೆ ಸಂಪರ್ಕ ಹೊಂದಿರಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ತಿರುವರಂಗ ನಾರಾಯಣಸ್ವಾಮಿ, ಉಪನಿರ್ದೇಶಕ ವೆಂಕಟೇಶಯ್ಯ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಸಿ.ಬಸವರಾಜೇಗೌಡ ಸ್ವಾಗತಿಸಿದರು. ಆರ್.ಮುನಿನಂಜಪ್ಪ ವಂದಿಸಿದರು.

ಸಚಿವರು ಈ ಸಂದರ್ಭದಲ್ಲಿ ಮಕ್ಕಳ ಶಿಕ್ಷಣ ಹಕ್ಕು ರಕ್ಷಣೆಯಲ್ಲಿ ಪ್ರಮಾಣ ವಚನ ಬೋಧನೆ, ಶಿಕ್ಷಣ ಕಾಯ್ದೆ ಹಕ್ಕು ಹಾಗು ಮಕ್ಕಳ ಹಕ್ಕುಗಳ ಗೋಡೆ ಫಲಕ ಬಿಡುಗಡೆ, ಮಕ್ಕಳಿಗೆ ಉಚಿತ ಸೈಕಲ್, ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆ ಹಾಗೂ ಎಂಟನೇ ತರಗತಿಯ ಮಕ್ಕಳಿಗೆ ಅವರು ಪಾಠ ಬೋಧನೆ ಮಾಡಿದರು.
ಶಾಲೆ ಬಿಟ್ಟು ಮತ್ತೆ ಶಾಲೆಗೆ ಮರಳಿದ ಮಕ್ಕಳನ್ನು ಅಲಂಕೃತ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ಶಾಲೆಗೆ ಕರೆತಂದಿದ್ದು ವಿಶೇಷವಾಗಿತ್ತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.