ADVERTISEMENT

ಶಿಕ್ಷಣ ವ್ಯವಸ್ಥೆಯಲ್ಲಿ ಮಾರ್ಪಾಡು ಅಗತ್ಯ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2011, 19:00 IST
Last Updated 18 ನವೆಂಬರ್ 2011, 19:00 IST
ಶಿಕ್ಷಣ ವ್ಯವಸ್ಥೆಯಲ್ಲಿ ಮಾರ್ಪಾಡು ಅಗತ್ಯ
ಶಿಕ್ಷಣ ವ್ಯವಸ್ಥೆಯಲ್ಲಿ ಮಾರ್ಪಾಡು ಅಗತ್ಯ   

ಬೆಂಗಳೂರು: `ಉನ್ನತ ವಿದ್ಯಾಭ್ಯಾಸ ಪಡೆದವರಲ್ಲಿಯೂ ವೃತ್ತಿಪರತೆಯ ಕೊರತೆ ಎದ್ದು ಕಾಣುತ್ತಿದ್ದು, ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸಬೇಕು ಎಂದು ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿ.ಎಸ್.ನಾರಾಯಣಸ್ವಾಮಿ ಹೇಳಿದರು.

ಭಾರತೀಯ ವಿದ್ಯಾಭವನವು ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಪದವಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಕಾರ್ಮಿಕ ಇಲಾಖೆಯು ನೂತನ ಯೋಜನೆಗಳ ಮೂಲಕ ರಾಜ್ಯದಲ್ಲಿ ಹೆಚ್ಚು ಹೆಚ್ಚು ಯುವ ವೃತ್ತಿಪರರನ್ನು ತರಬೇತುಗೊಳಿಸುವಲ್ಲಿ ಶ್ರಮಿಸುತ್ತಿದೆ. ಅಲ್ಲದೇ ವಿವಿಧ ವಲಯದ ಕೈಗಾರಿಕೆಗಳಲ್ಲಿ ವೃತ್ತಿ ನಿಪುಣರಿಗೆ ಹೆಚ್ಚಿನ ಬೇಡಿಕೆಯಿದ್ದು, ವಿದ್ಯಾಸಂಸ್ಥೆಗಳು ವೃತ್ತಿ ಕೌಶಲಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡುವತ್ತ ಪ್ರಯತ್ನ ನಡೆಸಬೇಕಿದೆ~ ಎಂದು ಸಲಹೆ ನೀಡಿದರು.

`ವಿದ್ಯಾಭವನದ ವಿದ್ಯಾರ್ಥಿಗಳು ನಾನಾ ಉನ್ನತ ಹುದ್ದೆಗಳನ್ನು ನಿರ್ವಹಿಸುತ್ತಿದ್ದಾರೆ. ಇದರಿಂದ ಭವನವು ವೃತ್ತಿ ನಿಪುಣ ವಿದ್ಯಾರ್ಥಿಗಳನ್ನು ನೀಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ~ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಂವಹನ ಮತ್ತು ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಭಾರತೀಯ ವಿದ್ಯಾಭವನದ ಅಧ್ಯಕ್ಷ ಎನ್.ರಾಮಾನುಜ, ನಿರ್ದೇಶಕ ಎಚ್.ಎನ್.ಸುರೇಶ್, ಕಾರ್ಯದರ್ಶಿ ಎ.ಕೃಷ್ಣಮೂರ್ತಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.