ADVERTISEMENT

ಶೀಘ್ರ ವಿಲೇವಾರಿ ನ್ಯಾಯಾಲಯಗಳ ಸ್ಥಾಪನೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಜುಲೈ 2013, 19:50 IST
Last Updated 9 ಜುಲೈ 2013, 19:50 IST

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ಶೀಘ್ರವಾಗಿ ನಡೆಸಲು ಮುಚ್ಚಿರುವ ಶೀಘ್ರ ವಿಲೇವಾರಿ ನ್ಯಾಯಾಲಯಗಳನ್ನು ಪುನರ್ ಸ್ಥಾಪಿಸಬೇಕು ಎಂದು ಕರ್ನಾಟಕ ಮಾನವ ಹಕ್ಕುಗಳ ಜನಪರ ಸಮಾಜದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರೀಟಾ ಕುಮಾರ್ ಆಗ್ರಹಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನ್ಯಾಯಾಲಯಗಳು ಮತ್ತು ನ್ಯಾಯಾಧೀಶರ ಕೊರತೆಯಿಂದಾಗಿ ಪ್ರಕರಣಗಳ ವಿಚಾರಣೆ ಸ್ಥಗಿತಗೊಂಡಿರುವ ಕಾರಣ ಅಮಾಯಕರು ಅನೇಕ ದಿನಗಳಿಂದ ಜೈಲಿನಲ್ಲಿಯೇ ಇರುವಂತಾಗಿದೆ ಎಂದರು.

2013 ರ ಜೂನ್ ತಿಂಗಳಲ್ಲಿ ಒಟ್ಟು 54 ಶೀಘ್ರ ವಿಲೇವಾರಿ ನ್ಯಾಯಾಲಯಗಳನ್ನು ಮುಚ್ಚಲಾಯಿತು. ಈ ನ್ಯಾಯಾಲಯದ ನ್ಯಾಯಾಧೀಶರಿಗೆ ಬಡ್ತಿ ನೀಡಿ ಬೇರೆ ನ್ಯಾಯಾಲಯಗಳಿಗೆ ವರ್ಗಾವಣೆ ಮಾಡಲಾಗಿದೆ. ವಿವಿಧ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರೇ ಇಲ್ಲದ ಕಾರಣ ಅನೇಕ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ.

ಅಮಾಯಕರು ಜಾಮೀನು ಪಡೆಯಲೂ ಆಗುತ್ತಿಲ್ಲ. ಕೂಡಲೇ ಶೀಘ್ರ ವಿಲೇವಾರಿ ನ್ಯಾಯಾಲಯಗಳನ್ನು ಪುನರ್ ಸ್ಥಾಪಿಸಿ ನ್ಯಾಯಾಧೀಶರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.