ADVERTISEMENT

ಶೆಟ್ಟರ್ ಹೇಳಿಕೆಗೆ ಪರಮೇಶ್ವರ್ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2012, 19:30 IST
Last Updated 20 ಅಕ್ಟೋಬರ್ 2012, 19:30 IST

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ರಾಜ್ಯದಿಂದ ಹೊರಕ್ಕೆ ಅಟ್ಟುವಂತೆ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೀಡಿರುವ ಹೇಳಿಕೆ ಹತಾಶೆಯಿಂದ ಕೂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಟೀಕಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಬೇಜವಾಬ್ದಾರಿಯಾಗಿ ಮಾತನಾಡಿದ್ದಾರೆ. ಬಿಜೆಪಿ ಸರ್ಕಾರ ನಾಲ್ಕೂವರೆ ವರ್ಷಗಳಿಂದ ಭ್ರಷ್ಟಾಚಾರದಲ್ಲಿ ತೊಡಗಿದೆ. ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಅವರಿಗೆ ಇಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೇಂದ್ರದ ಯುಪಿಎ ಸರ್ಕಾರವು ಕರ್ನಾಟಕಕ್ಕೆ 80 ಸಾವಿರ ಕೋಟಿ ರೂಪಾಯಿಗೂ ಅಧಿಕ ಅನುದಾನ ನೀಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಇದನ್ನು ಯಾವ ರೀತಿ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಬಗ್ಗೆ ಶೆಟ್ಟರ್ ತಿಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.