ADVERTISEMENT

ಶೇ 90ರಷ್ಟು ಪೋಲಿಯೊ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2012, 19:30 IST
Last Updated 19 ಫೆಬ್ರುವರಿ 2012, 19:30 IST

ಮಹದೇವಪುರ: ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದಡಿ ವರ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ 6,399 ಮಕ್ಕಳಿಗೆ ಲಸಿಕೆ ಹಾಕಲಾಯಿತು. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಮಕ್ಕಳಿಗೆ ಲಸಿಕೆ ಹಾಕಲಾಗಿದ್ದು, ಶೇ 90.2ರಷ್ಟು ಸಾಧನೆಯಾಗಿದೆ.

ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಿಬಿಎಂಪಿ ಸದಸ್ಯ ಎಸ್.ಉದಯ ಕುಮಾರ್ ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಕ್ಕಳಲ್ಲಿ ಕಾಣಿಸಿಕೊಳ್ಳುವ ಶಾಶ್ವತ ಅಂಗವೈಕಲ್ಯವನ್ನು ಬೇರು ಸಮೇತ ಕಿತ್ತು ಹಾಕಲು ಆರೋಗ್ಯ ಇಲಾಖೆ ಕೈಗೊಂಡಿರುವ ಈ ಯೋಜನೆ ಯಶಸ್ವಿ ಆಗಬೇಕೆಂದರೆ ಪ್ರತಿ ಪಾಲಕರೂ ಪುಟ್ಟ ಮಕ್ಕಳಿಗೆ ತಪ್ಪದೇ ಪೋಲಿಯೊ ಹನಿ ಹಾಕಿಸಬೇಕು ಎಂದರು. ಆರೋಗ್ಯ ಕೇಂದ್ರದ ವೈದ್ಯ ಡಾ. ಬಿ.ಕೆ.ಕೃಷ್ಣಪ್ಪ, ವರ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಸತೀಶ ಕುಮಾರ್, ಸೋರಹುಣಸೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಸಿ.ಸಿ. ರವಿ ಉಪಸ್ಥಿತರಿದ್ದರು.

`ಹಗರಣಗಳೇ ದೊಡ್ಡ ಸಾಧನೆ~ (ತಲಘಟ್ಟಪುರ ವರದಿ): ಅಭಿವೃದ್ಧಿ ಹೆಸರಿನಲ್ಲಿ ಜನರನ್ನು ವಂಚಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಹಗರಣಗಳಲ್ಲಿ ಮುಳುಗಿದ್ದೇ ದೊಡ್ಡ ಸಾಧನೆ ಎಂದು ಕಾಂಗ್ರೆಸ್ ವಕ್ತಾರ ಎಸ್.ಟಿ.ಸೋಮಶೇಖರ್ ಟೀಕಿಸಿದ್ದಾರೆ.

ADVERTISEMENT

ಚಿಕ್ಕೇಗೌಡನಪಾಳ್ಯದಲ್ಲಿ ಹಮ್ಮಿಕೊಂಡಿದ್ದ ಹೆಮ್ಮಿಗೆಪುರ ವಾರ್ಡ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಸದಾನಂದ, ನಗರಸಭೆ ಮಾಜಿ ಸದಸ್ಯ ಸತ್ಯನಾರಾಯಣ, ನಗರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಚ್ಚು ವೆಂಕಟೇಶ್, ಕೆಂಗೇರಿ ಬ್ಲಾಕ್ ಅಧ್ಯಕ್ಷ ಕೆ.ಆರ್.ಮೂರ್ತಿ,  ಪ್ರಧಾನ ಕಾರ್ಯದರ್ಶಿ ಪಿ.ಗಾಂಧಿ , ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಭಗವಾನ್, ಪಂಚಾಯಿತಿ ಮಾಜಿ ಅಧ್ಯಕ್ಷ ದೊಡ್ಡಬೆಲೆ ನಾರಾಯಣಪ್ಪ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.