ADVERTISEMENT

ಶೋಷಿತರ ರಕ್ಷಣಾ ವೇದಿಕೆ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2014, 19:46 IST
Last Updated 14 ಮಾರ್ಚ್ 2014, 19:46 IST

ಬೆಂಗಳೂರು: ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಶೋಷಿತರ ರಕ್ಷಣಾ ವೇದಿಕೆ, ಸಂಸ್ಕಾರ್‌ ಚಾರಿಟಬಲ್‌ ಟ್ರಸ್ಟ್‌ನ್ನು ಉದ್ಘಾಟಿಸಲಾಯಿತು.

ವಕೀಲೆ ಪ್ರಮೀಳಾ ನೇಸರ್ಗಿ ವೇದಿಕೆ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ಶೋಷಣೆ ನಡೆಯು­ತ್ತಿದೆ. ರಾಜಕೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಮಹಿಳೆಯರನ್ನು ಬಳಸಿ­ಕೊಳ್ಳುತ್ತವೆಯೇ ಹೊರತು ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದರು.

ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿಪ್ರಕಾಶ್‌ ಮಿರ್ಜಿ ಮಾತ­ನಾಡಿ, ರಾಜ್ಯ ಸರ್ಕಾರವು ನಗರದಲ್ಲಿ ಬಾರ್‌ ಮತ್ತು ರೆಸ್ಟೋರೆಂಟ್‌ಗಳ ವಾರಾಂತ್ಯದ ವಹಿವಾಟಿನ ಅವಧಿ­ಯನ್ನು ವಿಸ್ತರಿಸಿದೆ. ಅಂತಹ ಸ್ಥಳ­ಗಳಲ್ಲಿ  ದುಡಿಯುವ ಮಹಿಳೆಯರಿಗೆ ಸೂಕ್ತ ರಕ್ಷಣೆ ಮತ್ತು ಮೂಲ­ಸೌಕರ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಎಲ್‌.ಎನ್‌.ಹನುಮಂತ­ರಾ­ಯಪ್ಪ ಮಾತನಾಡಿದರು. ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆ­ಸ್ವಾಮಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.