ADVERTISEMENT

ಸಂಗೀತ ಪರಂಪರೆ ಉಳಿಸಿ ಬೆಳೆಸಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2012, 19:30 IST
Last Updated 11 ಏಪ್ರಿಲ್ 2012, 19:30 IST

ಯಲಹಂಕ: ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ವಿದ್ವಾಂಸರನ್ನು ಗೌರವಿಸುವುದರ ಜೊತೆಗೆ ನಮ್ಮ ಸಂಗೀತ ಪರಂಪರೆಯನ್ನು ಉಳಿಸಿ ಬೆಳೆಸಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.

ಅಮೃತಹಳ್ಳಿಯ ಗೋವಿಂದಪ್ಪ ಬಡಾವಣೆಯಲ್ಲಿ ಶ್ರೀರಾಮ ಸೇವಾ ಪ್ರತಿಷ್ಠಾನ ಟ್ರಸ್ಟ್‌ನ ವತಿಯಿಂದ ಶ್ರೀರಾಮ ದೇವಾಲಯದಲ್ಲಿ ಏರ್ಪಡಿಸ್ದ್ದಿದ ಪುರಂದರ, ತ್ಯಾಗರಾಜರ ಮತ್ತು ಕನಕದಾಸರ ಆರಾಧನಾ ಮಹೋತ್ಸವ ಹಾಗೂ ಸಂಗೀತ ವಿದ್ವಾಂಸರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಸಂಗೀತ ವಿದ್ವಾಂಸ ನೀಲಾ ರಾಮಗೋಪಾಲ್, ಮೃದಂಗ ವಿದ್ವಾಂಸಎ.ವಿ.ಆನಂದ್, ಘಟಂ ವಿದ್ವಾಂಸ ಎಂ.ಎ.ಕೃಷ್ಣಮೂರ್ತಿ  ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಎ.ರವಿ, ಬಿಬಿಎಂಪಿ ಸದಸ್ಯ ಎಂ.ಮುನಿರಾಜು,  ಹನುಮಂತಪ್ಪ,  ವೆಂಕಟೇಶ್, ಮುನಿರಾಜು,  ಟಿ.ಎಸ್. ಚಂದ್ರಶೇಖರ್, ಟ್ರಸ್ಟ್‌ನ ಅಧ್ಯಕ್ಷ ಎಂ. ಕೋದಂಡರಾಮು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.