ADVERTISEMENT

ಸಂಗೀತ, ಸಂವಾದ ಇಂದು

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2012, 19:30 IST
Last Updated 24 ಮಾರ್ಚ್ 2012, 19:30 IST

ಬೆಂಗಳೂರು: `ಯುಗಾದಿ ಉತ್ಸವ~ದ ಅಂಗವಾಗಿ ತ್ರಿದಳ ಸಂಸ್ಥೆಯವರು, `ಪ್ರಜಾವಾಣಿ~ ಹಾಗೂ `ಡೆಕ್ಕನ್ ಹೆರಾಲ್ಡ್~ ಪ್ರಾಯೋಜಕತ್ವದಲ್ಲಿ ಭಾನುವಾರ ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ವಿದ್ವಾನ್ ಆರ್.ಕೆ. ಪದ್ಮನಾಭ ಅವರ ಸಂವಾದ ಹಾಗೂ ಸಂಗೀತ ಕಾರ್ಯಕ್ರಮ ಆಯೋಜಿಸಿದ್ದಾರೆ.

ಕೆ.ಆರ್.ರಸ್ತೆಯಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಸಂಜೆ 5.30ರಿಂದ ರಾತ್ರಿ 9 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ಪ್ರತಿ ಟಿಕೆಟ್ ದರ 100 ರೂಪಾಯಿಯಾಗಿರುತ್ತದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲೂ ಟಿಕೆಟ್ ನೀಡಲಾಗುತ್ತದೆ. ಆಸಕ್ತರು ಭಾಗವಹಿಸುವಂತೆ ಕೋರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.