ADVERTISEMENT

ಸಂದರ್ಶನ ಮುಂದೂಡಿಕೆ: ನೋಟಿಸ್

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2013, 19:51 IST
Last Updated 8 ಏಪ್ರಿಲ್ 2013, 19:51 IST

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ಭರ್ತಿಗೆ ಸಂದರ್ಶನ ನಡೆಸದಂತೆ ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ನಿರ್ದೇಶನ ನೀಡಿರುವುದನ್ನು ಪ್ರಶ್ನಿಸಿ ಜೆ. ಅಮಿತ್ ಎಂಬುವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಗೆ ಪ್ರತಿ ಹೇಳಿಕೆ ಸಲ್ಲಿಸುವಂತೆ ರಾಜ್ಯದ ಮುಖ್ಯ ಚುನಾವಣಾಧಿಕಾರಿ, ಕೆಪಿಎಸ್‌ಸಿ ಮತ್ತು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲು ನ್ಯಾಯಮೂರ್ತಿ ಡಿ.ವಿ. ಶೈಲೇಂದ್ರ ಕುಮಾರ್ ಸೋಮವಾರ ಆದೇಶಿಸಿದರು.

ನೀತಿ ಸಂಹಿತೆಯ ಕಾರಣ ಮುಂದಿಟ್ಟು, ನೇಮಕ ಪ್ರಕ್ರಿಯೆಗೆ ನಿರ್ಬಂಧ ವಿಧಿಸಿರುವುದು ಸರಿಯಲ್ಲ. ಚುನಾವಣಾ ನೀತಿ ಸಂಹಿತೆಯು ಸರ್ಕಾರಕ್ಕೆ ಅನ್ವಯ ಆಗುತ್ತದೆ. ಆದರೆ ಕೆಪಿಎಸ್‌ಸಿಯಂಥ ಸಾಂವಿಧಾನಿಕ ಸಂಸ್ಥೆಗೆ ಅದು ಅನ್ವಯ ಆಗುವುದಿಲ್ಲ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ವಿಚಾರಣೆ ಮುಂದೂಡಲಾಗಿದೆ.

ಅನಲಾಗ್ ಸಿಗ್ನಲ್:  ಖಾಸಗಿ ಉಪಗ್ರಹ ವಾಹಿನಿಗಳ `ಅನಲಾಗ್' ಮಾದರಿಯ ಸಿಗ್ನಲ್‌ಗಳನ್ನು ಮಂಗಳವಾರದವರೆಗೆ ಸ್ಥಗಿತಗೊಳಿಸದಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಸೆಟ್‌ಟಾಪ್ ಬಾಕ್ಸ್ ಅಳವಡಿಕೆಗೆ ಹೆಚ್ಚಿನ ಕಾಲಾವಕಾಶ ಕೋರಿ ಕೇಬಲ್ ಆಪರೇಟರ್‌ಗಳ ಸಂಘ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮಂಗಳವಾರ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.