ಬೆಂಗಳೂರು: ಕ್ರಿಮಿನಲ್ ಪ್ರಕರಣವೊಂದನ್ನು ಇತ್ಯರ್ಥಪಡಿಸುವ ಸಂಬಂಧ ಉದ್ಯಮಿ ಹುಸೇನ್ ಮೊಯಿನ್ ಫರೂಕ್ ಅವರಿಂದ ಐದು ಲಕ್ಷ ರೂಪಾಯಿ ಲಂಚ ಪಡೆದ ಆರೋಪ ಹೊತ್ತ ಕೆಜಿಎಫ್‌ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರ ವಿರುದ್ಧ ಹೆಚ್ಚಿನ ಮಾಹಿತಿ ನೀಡುವಂತೆ ಹೈಕೋರ್ಟ್ ಸರ್ಕಾರಕ್ಕೆ ಬುಧವಾರ ನಿರ್ದೇಶಿಸಿದೆ.
ಇವರ ವಿರುದ್ಧ ಫರೂಕ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ನಡೆಸುತ್ತಿದ್ದಾರೆ. ತಾವು ನೀಡಿರುವ ದೂರಿನ ಅನ್ವಯ ಸಂಪಂಗಿ ಅವರನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ, ತಮಗೆ ಸಂಪಂಗಿ ಅವರಿಂದ ಜೀವ ಬೆದರಿಕೆ ಇರುವುದಾಗಿ ಫರೂಖ್ ಅರ್ಜಿಯಲ್ಲಿ ತಿಳಿಸಿದ್ದಾರೆ.
ಸಂಪಂಗಿ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಲೋಕಾಯುಕ್ತರು ವಿಶೇಷ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಲು ಆದೇಶಿಸುವಂತೆ ಅರ್ಜಿಯಲ್ಲಿಕೋರಲಾಗಿದೆ. ಅಂತೆಯೇ, ಲಂಚ ಪ್ರಕರಣವನ್ನು ಮುಕ್ತಾಯ ಗೊಳಿಸಿ ಸ್ಪೀಕರ್ ಅವರು ಹೊರಡಿಸಿರುವ ಆದೇಶಕ್ಕೆ ತಡೆ ನೀಡುವಂತೆಯೂ ಅವರು ಮನವಿ ಮಾಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.