ADVERTISEMENT

ಸಂಸದರ ಆಪ್ತರ ಮೇಲೆ ಐ.ಟಿ ದಾಳಿ

​ಪ್ರಜಾವಾಣಿ ವಾರ್ತೆ
Published 3 ಮೇ 2018, 19:30 IST
Last Updated 3 ಮೇ 2018, 19:30 IST

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಪ್ರಭಾವಿ ಸಂಸದರೊಬ್ಬರ ಆಪ್ತರಿಗೆ ಸೇರಿದ ಬನ್ನೇರುಘಟ್ಟದ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ದೊಡ್ಡ ಮುಖಬೆಲೆಯ ನೋಟುಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಆದರೆ, ಐ.ಟಿ ಮೂಲಗಳು ಈ ಬಗ್ಗೆ ಏನನ್ನೂ ಹೇಳಿಲ್ಲ. ದಾಳಿ ಕುರಿತು ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT