ADVERTISEMENT

ಸಚಿನ್‌ಗೆ ಗೌರವ ಡಾಕ್ಟರೇಟ್: ವಿವಿ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2011, 19:15 IST
Last Updated 19 ಫೆಬ್ರುವರಿ 2011, 19:15 IST

ಬೆಂಗಳೂರು: ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದ್ದು, ರಾಜ್ಯಪಾಲರ ಒಪ್ಪಿಗೆಗಾಗಿ ಕಾಯುತ್ತಿದೆ.

ಇತ್ತೀಚೆಗೆ ನಡೆದ ವಿ.ವಿಯ ಸಿಂಡಿಕೇಟ್ ಸಭೆಯಲ್ಲಿ ತೆಂಡೂಲ್ಕರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ್ದು, ಸಂಬಂಧಪಟ್ಟ ನಿರ್ಣಯವನ್ನು ರಾಜ್ಯಪಾಲರ ಅನುಮತಿಗಾಗಿ ಕಳುಹಿಸಲಾಗಿತ್ತು. ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು  ಈ ನಿರ್ಣಯಕ್ಕೆ ಒಪ್ಪಿಗೆ ಸೂಚಿಸುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.