ADVERTISEMENT

ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2011, 19:30 IST
Last Updated 24 ಅಕ್ಟೋಬರ್ 2011, 19:30 IST

ಬೆಂಗಳೂರು:  ಭೂ ಅಕ್ರಮಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಸಚಿವರಾದ ಆರ್‌ಅಶೋಕ, ಮುರುಗೇಶ್ ನಿರಾಣಿ ಅವರ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಚಿವರಿಂದ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿ ಯುವ ಕಾಂಗ್ರೆಸ್ ಸದಸ್ಯರು     ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ಸರ್ಕಾರದ ಮಾಜಿ ಮುಖ್ಯಮಂತ್ರಿಯಿಂದ ಹಿಡಿದು ಇಂದಿನ ಸಚಿವರವರೆಗೂ ಭೂ ಕಬಳಿಕೆಯ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಯಡಿಯೂರಪ್ಪ ಮತ್ತು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನ್ಯಾಯಾಂಗ ಬಂಧನದಲ್ಲಿದ್ದಾರೆ. ತಮ್ಮ ಪಕ್ಷದ ನಾಯಕರ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದ ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದೂ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಎಸ್.ಮನೋಹರ್, ಸಿ.ಗೋವಿಂದರಾಜ್, ಡಿ.ಎ.ಪ್ರಮೋದ ಶಂಕರ್, ಕೃಷ್ಣಮೂರ್ತಿ, ಜಿ.ಮೋಹನ್‌ಕುಮಾರ್, ಶಂಷೀರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.