ಬೆಂಗಳೂರು: `ಹಿಂದುಳಿದ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸರ್ಕಾರ ಎರಡು ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದೆ~ ಎಂದು ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದರು.
ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ ಸೋಮವಾರ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಯೋಜನೆಗಳಡಿ 142 ಫಲಾನುಭವಿಗಳಿಗೆ ಒಟ್ಟು 48 ಲಕ್ಷ ರೂ. ಚೆಕ್ ವಿತರಿಸಿ ಅವರು ಮಾತನಾಡಿದರು.
`ಸಾಮಾಜಿಕ ವ್ಯವಸ್ಥೆಯ ಬೆನ್ನೆಲುಬಾಗಿರುವ ಹಿಂದುಳಿದ ವರ್ಗಗಳ ಕಲ್ಯಾಣಕ್ಕೋಸ್ಕರವೇ ಪ್ರತ್ಯೇಕ ಸಚಿವಾಲಯವನ್ನು ರಾಜ್ಯದಲ್ಲಿ ಆರಂಭಿಸಲಾಗುತ್ತಿದೆ. ಹಿಂದುಳಿದ ವರ್ಗದವರು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ಕರೆ ನೀಡಿದರು.
`ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆ ಜಾರಿಯಾಗಲು ಪ್ರಮುಖ ರೂವಾರಿ ದೇವರಾಜ ಅರಸು. ರಾಜಕೀಯ ಸೇರಿದಂತೆ ಎಲ್ಲ ವಲಯಗಳಲ್ಲೂ ಹಿಂದುಳಿದವರಿಗೆ ಪ್ರಾತಿನಿಧ್ಯ ಸಿಗಬೇಕೆಂಬ ಅವರ ಆಶಯಕ್ಕೆ ಬಿಜೆಪಿ ಸರ್ಕಾರ ಬದ್ದವಾಗಿದೆ~ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯರಾದ ಎಚ್.ಆರ್.ಕೃಷ್ಣಪ್ಪ, ರವೀಂದ್ರನ್ ಹಾಗೂ ಮಂಜುನಾಥ್‌ರವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.