ADVERTISEMENT

ಸಚಿವೆಗೆ ಕಪ್ಪು ಬಾವುಟ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2011, 20:00 IST
Last Updated 1 ಅಕ್ಟೋಬರ್ 2011, 20:00 IST

ಪೀಣ್ಯ ದಾಸರಹಳ್ಳಿ: ಯಶವಂತಪುರ ಕ್ಷೇತ್ರದ ದೊಡ್ಡ ಬಿದರಕಲ್ಲು ವಾರ್ಡ್ ವ್ಯಾಪ್ತಿಯ ತಿಪ್ಪೇನಹಳ್ಳಿಯಲ್ಲಿ ಪ್ರಾಥ ಮಿಕ ಆರೋಗ್ಯ ಕೇಂದ್ರ ಉದ್ಘಾಟನೆಗೆ ಸ್ಥಳೀಯ ಪಾಲಿಕೆ ಸದಸ್ಯರಿಗೆ ಅಧಿಕೃತ ಆಹ್ವಾನ ನೀಡಿಲ್ಲ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಶನಿವಾರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆಗೆ ಮುಂದಾದಾಗ, ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು.

ಆನಂತರ ಸಚಿವೆ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿದರು.
ದೊಡ್ಡಬಿದರಕಲ್ಲು ವಾರ್ಡ್‌ನಲ್ಲಿ ಜೆಡಿಎಸ್ ಅಭ್ಯರ್ಥಿ ಆಯ್ಕೆಯಾಗಿದ್ದಾರೆ ಎಂಬ ಕಾರಣಕ್ಕೆ ಸಚಿವೆ ತಾರತಮ್ಯ ಧೋರಣೆ ಅನುಸರಿಸುತ್ತ್ದ್ದಿದಾರೆ, ಇದು ಹೀಗೇ ಮುಂದುವ ರಿದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕಾರ್ಯಕರ್ತರು ಎಚ್ಚರಿಸಿದರು.

ಪಾಲಿಕೆ ಸದಸ್ಯೆ ಗಾಯಿತ್ರಿ ಜವರಾಯಿಗೌಡ ಮಾತನಾಡಿ, ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ವರ್ತಿಸಿ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು. ನ್ಯಾಯ ಕೇಳಲು ಹೋದ ಜೆಡಿಎಸ್ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿರುವುದು ಹೇಯ ಕೃತ್ಯ ಎಂದು ಅವರು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.