ಬೆಂಗಳೂರು: ಮಾದಿಗ ಜನಾಂಗಕ್ಕೆ ಒಳ ಮೀಸಲಾತಿ ಕಲ್ಪಿಸಲು ಶಿಫಾರಸು ಮಾಡಿರುವ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಕೂಡಲೇ ಜಾರಿ ಮಾಡಬೇಕು ಎಂದು ಮಾದಿಗ ದಂಡೋರ ಸಮಿತಿ ಆಗ್ರಹಿಸಿದೆ.
ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಜೆ.ನರಸಿಂಹಮೂರ್ತಿ, ‘ಮಾದಿಗ ಜನಾಂಗ ರಾಜ್ಯದ ಬಹುದೊಡ್ಡ ಸಮುದಾಯವಾಗಿದೆ. ಈ ಅವಕಾಶ ವಂಚಿತ ಸಮುದಾಯವು ತೀವ್ರ ಶೋಷಣೆಗೂ ಒಳಗಾಗುತ್ತಿದೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ಇಲ್ಲದಿದ್ದಲ್ಲಿ ಮುಂಬ ರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡದಿರಲು ತೀರ್ಮಾನಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.