ADVERTISEMENT

ಸಬೂಬು ಬೇಡ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2012, 19:30 IST
Last Updated 2 ಏಪ್ರಿಲ್ 2012, 19:30 IST

ಬೆಂಗಳೂರು: ಕಾಲಮಿತಿಯಲ್ಲಿ ಸೇವೆ ನೀಡ ಬೇಕೆನ್ನುವ `ಸಕಾಲ~ದಿಂದ ತಪ್ಪಿಸಿಕೊಳ್ಳಲು ಸರ್ಕಾರಿ ನೌಕರರು ಪರ್ಯಾಯ ಮಾರ್ಗ ಹುಡುಕದೇ ಕಾರ್ಯನಿರ್ವಹಿಸಬೇಕು~ ಎಂದು ಸಚಿವ ಆರ್.ಅಶೋಕ ಹೇಳಿದರು.

ಬೆಂಗಳೂರು ನಗರ ಜಿಲ್ಲಾಡಳಿತವು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ `ಸಕಾಲ~ ನಾಗರಿಕ ಸೇವಾ ಖಾತರಿ ಕಾಯ್ದೆಗೆ ಚಾಲನೆ ನೀಡಿ ಅವರು ಮಾತನಾಡಿದರು.

`ಸಕಾಲ~ ಸರ್ಕಾರದ ಬಹನಿರೀಕ್ಷಿತ ಯೋಜನೆಯಾಗಿದ್ದು, ಸರ್ಕಾರಿ ನೌಕರರು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಬೇಕು. ನೌಕರರು ಕಡತ ವಿಲೇವಾರಿ ವಿಳಂಬ ಮಾಡುವುದು ಮತ್ತು ಸೇವೆ ಬಯಸಿ ಬಂದವರಿಗೆ ಸಬೂಬು ಹೇಳುವುದನ್ನು ಬಿಡಬೇಕು~ ಎಂದು ಸಲಹೆ ನೀಡಿದರು.

`ನಾಗರಿಕ ಸೇವಾ ಖಾತರಿ ಕಾಯ್ದೆಯ ಜಾರಿಯಿಂದ ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆದಾಡುವುದು ತಪ್ಪುತ್ತದೆ. ಈ ಯೋಜನೆಯ ಪೂರ್ಣ ಯಶಸ್ಸು ಸರ್ಕಾರಿ ನೌಕರರು ಮತ್ತು ಸಾರ್ವಜನಿಕ ಸಹಕಾರದ ಮೇಲೆ ನಿಂತಿದೆ~ ಎಂದು ಹೇಳಿದರು.

ಜಿಲ್ಲಾಧಿಕಾರಿ ಎಂ.ಕೆ.ಅಯ್ಯಪ್ಪ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿದ್ದಯ್ಯ, ಜಿಲ್ಲೆ ಮತ್ತು ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.