ಹೊಸಕೋಟೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೊಠಡಿಗಳ ಕೊರತೆಯಿಂದ ಪಾಳಿಯಲ್ಲಿ ತರಗತಿಗಳನ್ನು ನಡೆಸುತ್ತಿರುವುದರಿಂದ ಹೊಸ ಕೊಠಡಿಗಳ ನಿರ್ಮಾಣಕ್ಕಾಗಿ ಒಂದು ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಅವರು ಹೇಳಿದರು.
ಕಾಲೇಜಿನಲ್ಲಿ ಆರಂಭವಾಗಿರುವ ಎನ್‌ಸಿಸಿ ಘಟಕ ಮತ್ತು ಈ ಸಾಲಿನ ಎನ್‌ಎಸ್‌ಎಸ್, ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಂಶುಪಾಲ ಸಿ.ಮರಿರಾಜ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಎಪಿಎಂಸಿ ಅಧ್ಯಕ್ಷ ಸಿ.ಮುನಿಯಪ್ಪ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ ಕುಮಾರ್, ಪುರಸಭೆ ಸದಸ್ಯ ಸಿ.ಜಯರಾಜ್ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.