ADVERTISEMENT

ಸರ್ಕಾರಿ ಜಾಹೀರಾತು: ಉಪ ಲೋಕಾಯುಕ್ತರಿಗೆ ದೂರು

​ಪ್ರಜಾವಾಣಿ ವಾರ್ತೆ
Published 2 ಜೂನ್ 2015, 19:54 IST
Last Updated 2 ಜೂನ್ 2015, 19:54 IST
ಸರ್ಕಾರಿ ಜಾಹೀರಾತು: ಉಪ ಲೋಕಾಯುಕ್ತರಿಗೆ ದೂರು
ಸರ್ಕಾರಿ ಜಾಹೀರಾತು: ಉಪ ಲೋಕಾಯುಕ್ತರಿಗೆ ದೂರು   

ಬೆಂಗಳೂರು: ಸರ್ಕಾರಿ ಜಾಹೀರಾತು ಫಲಕಗಳಿಂದ ಮುಖ್ಯಮಂತ್ರಿ ಮತ್ತು ಸಚಿವರ ಭಾವಚಿತ್ರ ತೆಗೆಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಸರ್ಕಾರಿ ಜಾಹೀರಾತುಗಳಲ್ಲಿ ಪ್ರಧಾನಿ, ರಾಷ್ಟ್ರಪತಿ ಮತ್ತು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹೊರತುಪಡಿಸಿ ಬೇರೆ ಯಾರ ಭಾವಚಿತ್ರವೂ ಇರಬಾರದು ಎಂದು ಆದೇಶಿಸಿದೆ.

ಆದರೆ ರಾಜ್ಯ ಸರ್ಕಾರ ವಿವಿಧೆಡೆ ಅಳವಡಿಸಿರುವ ಜಾಹೀರಾತು ಫಲಕಗಳಿಂದ ಮುಖ್ಯಮಂತ್ರಿ, ಸಚಿವರು ಮತ್ತು ಜನಪ್ರತಿನಿಧಿಗಳ ಭಾವಚಿತ್ರ ತೆಗೆಯಲು ಇದುವರೆಗೆ ಕ್ರಮ ಕೈಗೊಂಡಿಲ್ಲ ಎಂದು ಬೆಂಗಳೂರಿನ ಸಾಯಿದತ್ತ ಎಂಬುವರು ದೂರು ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.