ADVERTISEMENT

ಸರ್ಕಾರ ವಜಾಗೊಳಿಸಿ: ಬಿಎಸ್‌ವೈ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2018, 19:43 IST
Last Updated 9 ಮಾರ್ಚ್ 2018, 19:43 IST
ಬಿ.ಎಸ್. ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: ‘ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ ಕೊಲೆ ಯತ್ನ ಪ್ರಕರಣದಲ್ಲಿ ಸರ್ಕಾರದ ಭದ್ರತಾ ವೈಫಲ್ಯ ಸಾಬೀತಾಗಿದ್ದು, ರಾಜ್ಯ ಸರ್ಕಾರವನ್ನು ತಕ್ಷಣ ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದರು.

‘ಲೋಕಾಯುಕ್ತರ ಕೊಲೆಯತ್ನ ಪ್ರಕರಣ ಕುರಿತಂತೆ ಗುರುವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್‍ಸಿಂಗ್ ಜೊತೆ ಚರ್ಚಿಸಿದ್ದೇನೆ. ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರದಿಂದ ವರದಿ ಕೇಳಿದೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ 7,748 ಕೊಲೆಗಳಾಗಿವೆ, 9,920 ದಲಿತರ ಮೇಲೆ ದೌರ್ಜನ್ಯ ಪ್ರಕರಣ ಸಂಭವಿಸಿವೆ. 7,781 ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. 5,545 ದರೋಡೆಗಳು ನಡೆದಿವೆ. ಇದು ಸಿದ್ದರಾಮಯ್ಯ ಸರ್ಕಾರದ ಸಾಧನೆ’ ಎಂದು ಟೀಕಿಸಿದರು.

ADVERTISEMENT

ಬಿಜೆಪಿ ಸೇರ್ಪಡೆ: ಮೈಸೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್. ಚಂದ್ರಶೇಖರ್, ಜನತಾ ಬಜಾರ್ ಉಪಾಧ್ಯಕ್ಷ ಬಿ. ಶ್ರೀನಿವಾಸ್, ಮುಸ್ಲಿಂ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕ ಅಬ್ದುಲ್ ಮುಜೀಬ್, ಕಾಂಗ್ರೆಸ್ ಮುಖಂಡರಾದ ಎಚ್.ಎಸ್. ರಾಮಮೂರ್ತಿ, ಎನ್. ಮಂಜುನಾಥ್, ಮಹದೇವಸ್ವಾಮಿ ಬಿಜೆಪಿ ಸೇರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.