ADVERTISEMENT

ಸಹಸ್ರಾರ್ಜುನ ಜಯಂತ್ಯುತ್ಸವ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2012, 20:01 IST
Last Updated 26 ನವೆಂಬರ್ 2012, 20:01 IST

ಬೆಂಗಳೂರು: ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದಿಂದ ಈಚೆಗೆ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜರಾಜೇಶ್ವರ ಸಹಸ್ರಾರ್ಜುನ ಮಹಾರಾಜರ ಜಯಂತ್ಯುತ್ಸವವನ್ನು ಏರ್ಪಡಿಸಲಾಗಿತ್ತು.

ಸುರೇಶ್ವರಾನಂದ ಭಾರತಿ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಂಘಟನೆ ಅಧ್ಯಕ್ಷ ಹರಿಖೋಡೆ ಕಾರ್ಯಕ್ರಮ ಉದ್ಘಾಟಿಸಿದರು. ರಾಮಚಂದ್ರಸಾ ಖೋಡೆ ಧ್ವಜಾರೋಹಣ ಮಾಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮಾಜದ ಗಣ್ಯರನ್ನು ಸನ್ಮಾನಿಸಲಾಯಿತು.

ಸಂಸದ ಪಿ.ಸಿ. ಮೋಹನ್, ಶಾಸಕರಾದ ಎಂ.ಕೃಷ್ಣಪ್ಪ, ದಿನೇಶ್ ಗುಂಡೂರಾವ್, ಬಿಬಿಎಂಪಿ ಸದಸ್ಯರಾದ ಎಸ್.ಜಿ. ರವೀಂದ್ರ, ಎಲ್.ಶಿವಕುಮಾರ್ ಪಾಲ್ಗೊಂಡಿದ್ದರು. ಡಿ. ಗಂಗಾಧರಸಾ ಸ್ವಾಗತಿಸಿದರು. ಎಂ.ಎನ್. ರಾಮ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.