ADVERTISEMENT

ಸಹಾಯಕ ಕಂದಾಯ ಅಧಿಕಾರಿ ಅಮಾನತು

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2013, 19:30 IST
Last Updated 6 ಡಿಸೆಂಬರ್ 2013, 19:30 IST

ಬೆಂಗಳೂರು: ‘ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದು ಬಂಧನಕ್ಕೆ ಒಳಗಾಗಿರುವ ಪ್ರಭಾರ ಸಹಾಯಕ ಕಂದಾಯ ಅಧಿಕಾರಿ ಚಂದ್ರಕಾಂತ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ’ ಎಂದು ಬಿಬಿಎಂಪಿ ಹೆಚ್ಚುವರಿ ಆಯುಕ್ತರಾದ (ಆಡಳಿತ) ಬಿ.ಬಿ. ಕಾವೇರಿ ತಿಳಿಸಿದ್ದಾರೆ.

ಆಯುಕ್ತರ ಅನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಟ್ಟು ಹೋಗಬಾರದು ಎಂದು ಅವರು ಹೊರಡಿಸಿದ ಅಮಾನತು ಆದೇಶದಲ್ಲಿ ತಿಳಿಸಲಾಗಿದೆ. ಚಂದ್ರಕಾಂತ ಅವರ ವಿರುದ್ಧ ವಿವಿಧ ಕಲಂಗಳ ಅಡಿಯಲ್ಲಿ ಮೊಕದ್ದಮೆ ದಾಖಲಾದ ಕುರಿತು ಲೋಕಾಯುಕ್ತ ಪೊಲೀಸರಿಂದ ಮಾಹಿತಿ ಲಭ್ಯವಾಗಿದೆ ಎಂದೂ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.