ADVERTISEMENT

ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2018, 19:58 IST
Last Updated 8 ಮಾರ್ಚ್ 2018, 19:58 IST
ಪಿಟೀಲು ವಾದಕ ಮೈಸೂರು ಎಂ. ಮಂಜುನಾಥ್ ಹಾಗೂ ಮೃದಂಗ ವಾದಕ ಅರ್ಜುನ್ ಕುಮಾರ್ ಕಾರ್ಯಕ್ರಮ ನಡೆಸಿಕೊಟ್ಟರು
ಪಿಟೀಲು ವಾದಕ ಮೈಸೂರು ಎಂ. ಮಂಜುನಾಥ್ ಹಾಗೂ ಮೃದಂಗ ವಾದಕ ಅರ್ಜುನ್ ಕುಮಾರ್ ಕಾರ್ಯಕ್ರಮ ನಡೆಸಿಕೊಟ್ಟರು   

ಬೆಂಗಳೂರು: ಪಿ.ಇ.ಎಸ್. ವಿಶ್ವವಿದ್ಯಾಲಯದಲ್ಲಿ ‘ಆತ್ಮತೃಷಾ-18’ ಸಾಂಸ್ಕೃತಿಕ ಉತ್ಸವಕ್ಕೆ ಗುರುವಾರ ಚಾಲನೆ ನೀಡಲಾಯಿತು.

‘ಇಂದಿನ ಶಿಕ್ಷಣ ಪದ್ಧತಿಯಲ್ಲಿ ಕಲೆ ಹಾಗೂ ಅದರ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕು. ಇಂದಿನ ಪೀಳಿಗೆಯ ವಿದ್ಯಾರ್ಥಿಗಳು ನಮ್ಮ ಭಾರತೀಯ ಸಂಸ್ಕೃತಿಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರವಹಿಸಬೇಕು. ಈ ಸಾಲಿನ ಆತ್ಮತೃಷಾ ಉತ್ಸವ ಮನರಂಜನೆಯ ಉತ್ಸವವಾಗಿ ಉಳಿಯದೆ, ಹಲವಾರು ಸಂಸ್ಥೆಗಳ ಜೊತೆ ಕೈಜೋಡಿಸಿ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಸಹಾಯ ಮಾಡುತ್ತಿದೆ’ ಎಂದು ಪಿ.ಇ.ಎಸ್. ವಿಶ್ವವಿದ್ಯಾಲಯದ ಸಂಸ್ಥಾಪಕ ಎಂ.ಆರ್. ದೊರೆಸ್ವಾಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT