ADVERTISEMENT

ಸಾಧಕಿಯರಿಗೆ ‘ಸ್ಪಂದನ ಸ್ತ್ರೀ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2018, 19:30 IST
Last Updated 31 ಮಾರ್ಚ್ 2018, 19:30 IST
ಸಾಲುಮರದ ತಿಮ್ಮಕ್ಕ ಅವರಿಗೆ ಸಚಿವ ಎಚ್‌.ಎಂ.ರೇವಣ್ಣ ‘ಸ್ಪಂದನ ಸ್ತ್ರೀ’ ಪ್ರಶಸ್ತಿ ಪ್ರದಾನ ಮಾಡಿದರು. ವೇದಿಕೆ ಅಧ್ಯಕ್ಷ ಎಂ.ಶಿವರಾಜು, ಸಚಿವ ಎಂ.ರಾಮಲಿಂಗಾರೆಡ್ಡಿ ಇತರರು ಇದ್ದಾರೆ
ಸಾಲುಮರದ ತಿಮ್ಮಕ್ಕ ಅವರಿಗೆ ಸಚಿವ ಎಚ್‌.ಎಂ.ರೇವಣ್ಣ ‘ಸ್ಪಂದನ ಸ್ತ್ರೀ’ ಪ್ರಶಸ್ತಿ ಪ್ರದಾನ ಮಾಡಿದರು. ವೇದಿಕೆ ಅಧ್ಯಕ್ಷ ಎಂ.ಶಿವರಾಜು, ಸಚಿವ ಎಂ.ರಾಮಲಿಂಗಾರೆಡ್ಡಿ ಇತರರು ಇದ್ದಾರೆ   

ಬೆಂಗಳೂರು: ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ, ಸಾಹಿತಿ ಎಂ.ಆರ್.ಕಮಲಾ, ಕಲಾವಿದೆ ಸತ್ಯಭಾಮ, ಪ್ರಜಾಪಿತ ಬ್ರಹ್ಮಕುಮಾರಿ ಸಮಾಜದ ಬಿ.ಕೆ.ಪಾರ್ವತಿ, ಸಮಾಜ ಸೇವಕಿಯರಾದ ಸುಲೋಚನಾ ಎಸ್.ಗುಜ್ಜಾರ್, ಡಾ.ವನಜಾ ಶಿವಕುಮಾರ್ ಅವರಿಗೆ ಸ್ಪಂದನ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ‘ಸ್ಪಂದನ ಸ್ತ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಗರದಲ್ಲಿ ಶನಿವಾರ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಐವರು ಮಹಿಳಾ ಸಾಧಕರಿಗೆ ಸಚಿವರಾದ ಎಂ.ರಾಮಲಿಂಗಾರೆಡ್ಡಿ ಮತ್ತು ಎಚ್‌.ಎಂ.ರೇವಣ್ಣ ಪ್ರಶಸ್ತಿ ಪ್ರದಾನ ಮಾಡಿದರು.

ನಂತರ ಮಾತನಾಡಿದ ಎಂ.ರಾಮಲಿಂಗಾರೆಡ್ಡಿ, ‘ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಮೊದಲ ಬಾರಿಗೆ ಮಹಿಳೆಯರಿಗೆ
ಶೇ 18ರಷ್ಟು ಮೀಸಲಾತಿ ಜಾರಿಗೆ ತಂದರು. ನಂತರ ರಾಜೀವ್ ಗಾಂಧಿಪ್ರಧಾನಿಯಾಗಿದ್ದಾಗ ಮಹಿಳಾ ಮೀಸಲಾತಿಯನ್ನು ಶೇ 33ರಷ್ಟಕ್ಕೆ ಹೆಚ್ಚಿಸಿದರು. ಎಲ್ಲ ಕ್ಷೇತ್ರದಲ್ಲೂ ಮೀಸಲಾತಿಕಲ್ಪಿಸಲಾಗಿದೆ. ಈ ಅವಕಾಶ ಬಳಸಿಕೊಂಡು ಮಹಿಳೆಯರು ಇನ್ನೂ ರಾಜಕೀಯದಲ್ಲೂ ಉತ್ತುಂಗಕ್ಕೆ ಏರಬೇಕು’ ಎಂದು ಅವರು ಆಶಯ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.