ADVERTISEMENT

ಸಾಲ ಪಡೆದು ಗುತ್ತಿಗೆದಾರರ ಬಾಕಿ ಬಿಲ್‌ ಪಾವತಿಗೆ ಚಿಂತನೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2017, 19:54 IST
Last Updated 13 ಅಕ್ಟೋಬರ್ 2017, 19:54 IST
ಆರ್‌.ಸಂಪತ್‌ ರಾಜ್‌
ಆರ್‌.ಸಂಪತ್‌ ರಾಜ್‌   

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ವಾರ್ಡ್‌ ಮಟ್ಟದಲ್ಲಿ ವಿವಿಧ ಕಾಮಗಾರಿ ನಡೆಸಿರುವ ಸಣ್ಣ ಗುತ್ತಿಗೆದಾರರಿಗೆ ಬಾಕಿ ಪಾವತಿಸುವ ಕುರಿತು ಮೇಯರ್‌ ಆರ್‌.ಸಂಪತ್‌ ರಾಜ್‌ ಅವರು ಹಣಕಾಸು ವಿಭಾಗದ ಅಧಿಕಾರಿಗಳು ಹಾಗೂ ಬ್ಯಾಂಕ್‌ ಪ್ರತಿನಿಧಿಗಳ ಜತೆ ಶುಕ್ರವಾರ ಸಭೆ ನಡೆಸಿದರು.

ಗುತ್ತಿಗೆದಾರರು ಕೈಗೊಂಡಿರುವ ಕಾಮಗಾರಿಗಳು ಹಾಗೂ ಅವರಿಗೆ ನೀಡಬೇಕಿರುವ ಬಾಕಿ ಬಿಲ್‌ಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.

‘2015–16ನೇ ಸಾಲಿನಲ್ಲಿ ಕೈಗೊಂಡಿರುವ ಕಾಮಗಾರಿಗಳಿಗೆ ಇನ್ನೂ ಬಿಲ್‌ ಪಾವತಿಸಿಲ್ಲ. ಗುತ್ತಿಗೆದಾರರಿಗೆ ಒಟ್ಟು ₹700 ಕೋಟಿ ಬಾಕಿ ಪಾವತಿಸಬೇಕಿದೆ. ಬಿಲ್‌ ಪಾವತಿಸದ ಕಾರಣ ಗುತ್ತಿಗೆದಾರರು ಯಾವುದೇ ಟೆಂಡರ್‌ಗಳಲ್ಲಿ ಭಾಗವಹಿಸುತ್ತಿಲ್ಲ. ಇದರಿಂದ ವಾರ್ಡ್‌ ಮಟ್ಟದ ಕಾಮಗಾರಿಗಳು ಬಾಕಿ ಉಳಿದಿವೆ’ ಎಂದು ಸಂಪತ್‌ ರಾಜ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಬ್ಯಾಂಕ್‌ಗಳಿಂದ ಸಾಲ ಪಡೆದು ಗುತ್ತಿಗೆದಾರರ ಬಾಕಿ ಹಣ ಪಾವತಿಸುವ ಕುರಿತು ಬ್ಯಾಂಕ್‌ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇವೆ. ಸಾಲ ನೀಡುವ ಕುರಿತು ಮೇಲಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಅವರು ತಿಳಿಸಿದ್ದಾರೆ. ಮತ್ತೊಮ್ಮೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.