ADVERTISEMENT

‘ಸಾವಿತ್ರಿ ಬಾಯಿ ಫುಲೆ ಜನ್ಮದಿನವನ್ನು ಶಿಕ್ಷಕಿಯರ ದಿನವಾಗಿ ಆಚರಿಸಿ’

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2017, 20:47 IST
Last Updated 30 ಡಿಸೆಂಬರ್ 2017, 20:47 IST

ಬೆಂಗಳೂರು: ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಜನ್ಮದಿನವಾದ ಜ.3ರಂದು ‘ಶಿಕ್ಷಕಿಯರ ದಿನ’ ಎಂದು ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಆಗ್ರಹಿಸಿದೆ.

ಸರ್ಕಾರವನ್ನು ಒತ್ತಾಯ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿಗೆ ಪೋಸ್ಟ್ ಕಾರ್ಡಿನಲ್ಲಿ ಪತ್ರ ಬರೆಯುವ ಅಭಿಯಾನ ಹಮ್ಮಿಕೊಳ್ಳಲಾಗಿದೆ.

‘ಜನವರಿ 3, ಭಾರತದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆಯವರ ಜನ್ಮದಿನ. ಆ ತಾಯಿಗೆ ಅಕ್ಷರ ಕಲಿಸುವಲ್ಲಿ ಇದ್ದ ಬದ್ಧತೆ, ಪ್ರೀತಿ, ಕಾಳಜಿಗಳು ಎಲ್ಲರಿಗೂ ಅನುಕರಣೀಯ. ಅವರು ಹುಟ್ಟಿದ ದಿನವನ್ನು ಶಿಕ್ಷಕಿಯರ ದಿನವನ್ನಾಗಿ ಸರ್ಕಾರ ಘೋಷಿಸಬೇಕೆಂದು ಈ ಮೂಲಕ ತಮ್ಮಲ್ಲಿ ಒತ್ತಾಯಿಸುತ್ತಿದ್ದೇವೆ’ ಎಂದು ಪೋಸ್ಟ್‌ ಕಾರ್ಡಿನಲ್ಲಿ ಬರೆದು ಸಹಿ ಮಾಡಿ, ಹೆಸರು ವಿಳಾಸ ಸಹಿತ ಮುಖ್ಯಮಂತ್ರಿಗೆ ಕಳುಹಿಸುವಂತೆ ಒಕ್ಕೂಟ ಕೋರಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.