ADVERTISEMENT

ಸಾಹಿತಿಗಳು, ಕಲಾವಿದರ ಬೆಂಬಲ

​ಪ್ರಜಾವಾಣಿ ವಾರ್ತೆ
Published 6 ಜೂನ್ 2012, 19:30 IST
Last Updated 6 ಜೂನ್ 2012, 19:30 IST

ಬೆಂಗಳೂರು:ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಸಿಪಿಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಸ್. ಲಕ್ಷ್ಮಿ ಅವರಿಗೆ ಯು.ಆರ್. ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಬರಗೂರು ರಾಮಚಂದ್ರಪ್ಪ, ಜಿ.ರಾಮಕೃಷ್ಣ, ಗಿರೀಶ್ ಕಾಸರವಳ್ಳಿ, ಡಾ.ಎಂ.ಎಸ್. ತಿಮ್ಮಪ್ಪ ಸೇರಿದಂತೆ ಹಲವು ಸಾಹಿತಿಗಳು, ಶಿಕ್ಷಣ ತಜ್ಞರು, ಚಲನಚಿತ್ರ ನಿರ್ದೇಶಕರು ಹಾಗೂ ಗಣ್ಯರು ಬೆಂಬಲ ಸೂಚಿಸಿದ್ದಾರೆ.

ವಿಮರ್ಶಕರಾದ ಡಾ.ಕೆ. ಮರುಳಸಿದ್ಧಪ್ಪ, ಪ್ರೊ.ಎಚ್.ಎಸ್. ರಾಘವೇಂದ್ರ ರಾವ್, ಸಾಹಿತಿಗಳಾದ ಎಸ್.ಜಿ. ಸಿದ್ಧರಾಮಯ್ಯ, ಬೊಳುವಾರು ಮಹಮ್ಮದ್ ಕುಂಞ, ಚಿಂತಕ ಡಾ.ಜಿ.ಕೆ. ಗೋವಿಂದರಾವ್, ರಂಗಕರ್ಮಿ ಸಿ. ಬಸವಲಿಂಗಯ್ಯ, ಲೇಖಕಿ ಡಾ.ಬಿ.ಎನ್. ಸುಮಿತ್ರಾಬಾಯಿ, ಪತ್ರಕರ್ತೆ ಡಾ.ವಿಜಯಾ, ಕಿರುತೆರೆ ನಿರ್ದೇಶಕರಾದ ಬಿ. ಸುರೇಶ, ಟಿ.ಎನ್. ಸೀತಾರಾಂ ಮತ್ತಿತರರು ಲಕ್ಷ್ಮಿ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.