ADVERTISEMENT

`ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಬೇಕು'

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2013, 20:01 IST
Last Updated 12 ಏಪ್ರಿಲ್ 2013, 20:01 IST

ಕೃಷ್ಣರಾಜಪುರ: ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಜೊತೆಯಲ್ಲಿಯೇ ಕಾಲೇಜು ವಾರ್ಷಿಕ ಸಂಚಿಕೆಗಳಿಗೆ ಬರೆಯುವುದರ ಮೂಲಕ ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಬೇಕು ಎಂದು ಸಹಕಾರ ಸಂಘಗಳ ರಿಜಿಸ್ಟ್ರಾರ್ ಮತ್ತು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಡಾ.ಎನ್.ಎಸ್.ಚನ್ನಪ್ಪ ಗೌಡ ಸಲಹೆ ನೀಡಿದರು.

ಬಸವನಪುರ ಸಿಲಿಕಾನ್ ಸಿಟಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಈಚೆಗೆ ಏರ್ಪಡಿಸಿದ್ದ ವಾರ್ಷಿಕೋತ್ಸವದಲ್ಲಿ `ಪರಂಪರಾ -2013' ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಸ್ತುತ ಜಗತ್ತನ್ನು ರೂಪಿಸಲು ಸಹಕಾರಿಯಾಗಿದೆ. ಆದರೆ, ಇಂದಿನ ಪೀಳಿಗೆಯ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಆಸಕ್ತಿ ಮೂಡಿಸುವುದು ಅಗತ್ಯ ಎಂದರು.

ಸಂಸ್ಥೆಯ ನಿರ್ದೇಶಕ ಎಚ್.ಎಂ.ಮುಕುಂದ, ಡೀ ಡಾ.ಬಿ.ರೋಸ್ ಕವಿತ, ಪ್ರಾಚಾರ್ಯ ಸಿ.ಜ್ಞಾನೇಶ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.