ADVERTISEMENT

ಸಿಂಗನಾಯಕನಹಳ್ಳಿ: ಅಂಬೇಡ್ಕರ್ ಭವನ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2013, 19:38 IST
Last Updated 3 ಸೆಪ್ಟೆಂಬರ್ 2013, 19:38 IST
ಯಲಹಂಕ ಕ್ಷೇತ್ರ ವ್ಯಾಪ್ತಿಯ ಸಿಂಗನಾಯಕನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಅಂಬೇಡ್ಕರ್ ಭವನವನ್ನು ಶಾಸಕ ಎಸ್.ಆರ್.ವಿಶ್ವನಾಥ್ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್ ಚಿತ್ರದಲ್ಲಿದ್ದಾರೆ
ಯಲಹಂಕ ಕ್ಷೇತ್ರ ವ್ಯಾಪ್ತಿಯ ಸಿಂಗನಾಯಕನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಅಂಬೇಡ್ಕರ್ ಭವನವನ್ನು ಶಾಸಕ ಎಸ್.ಆರ್.ವಿಶ್ವನಾಥ್ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್ ಚಿತ್ರದಲ್ಲಿದ್ದಾರೆ   

ಯಲಹಂಕ: ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪೂರ್ಣಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಸೌಲಭ್ಯವನ್ನು ಶಾಸಕ ಎಸ್.ಆರ್.ವಿಶ್ವನಾಥ್ ಸಾರ್ವಜನಿಕರ ಸೇವೆಗೆ ಸಮರ್ಪಿಸಿದರು.

ಸಿಂಗನಾಯಕನ ಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣ, ಓವರ್‌ಹೆಡ್ ಟ್ಯಾಂಕ್, ಅಂಬೇಡ್ಕರ್ ಭವನ, ಮಾದಪ್ಪನಹಳ್ಳಿಯಲ್ಲಿ ಅಂಬೇಡ್ಕರ್ ಭವನ, ಮತ್ಕೂರು ಗ್ರಾಮದಲ್ಲಿ ಸಮುದಾಯ ಭವನ, ಕಾಕೋಳು ಗ್ರಾಮದಲ್ಲಿ ಬಯಲು ರಂಗಮಂದಿರ, ಬಸ್ ನಿಲ್ದಾಣ, ಬುಡಮನಹಳ್ಳಿ ಮತ್ತು ಅರಕೆರೆಗಳಲ್ಲಿ ಅಂಗನವಾಡಿ ಕೇಂದ್ರ ಮತ್ತು ಸ್ತ್ರೀಶಕ್ತಿ ಭವನದ ಉದ್ಘಾಟನೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಕಾಮಾಕ್ಷಿಪುರ ಗ್ರಾಮದಲ್ಲಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್ ಅವರು, ಶಂಕುಸ್ಥಾಪನೆ ನೆರವೇರಿಸಿದರು. 

ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿಸಮಿತಿ ಅಧ್ಯಕ್ಷ ಕೆ.ಎಂ.ಮಾರೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯೆ ಭಾರತಿ ವೆಂಕಟೇಶ್, ಬೆಂಗಳೂರು ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ದಿಬ್ಬೂರು ಜಯಣ್ಣ, ನಗರ  ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜಣ್ಣ ಮೊದಲಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.